ಚಾಮರಾಜನಗರ: ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಸ್ಥಳದಲ್ಲಿ ಅವರ ಅಭಿಮಾನಿಗಳು ಮುಂದಿನ ಚುನಾವಣೆಯಲ್ಲಿ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಅಂತ್ಯಕ್ರಿಯೆ ನಡೆಯಲಿರುವ ಜಮೀನಿನ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿದಂತೆ ಎಲ್ಲ ಮುಖಂಡರು ಕುಳಿತಿದ್ದರು. ಈ ಸಂದರ್ಭದಲ್ಲಿ ಧ್ರುವನಾರಾಯಣ ಅವರ ಬೆಂಬಲಿಗರು, ಮುಂದಿನ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ದರ್ಶನ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಅಭಿಮಾನಿಗಳು ಜೋರಾಗಿ ಗದ್ದಲ ಎಬ್ಬಿಸಿದಾಗ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರು ಕೈಮುಗಿದು, ಸಮ್ಮನಿರುವಂತೆ ಮನವಿ ಮಾಡಿದರು. ಆದರೂ ಅಭಿಮಾನಿಗಳು ಘೋಷಣೆಗಳನ್ನು ನಿಲ್ಲಿಸಲಿಲ್ಲ.

'ನಾವು ಇದ್ದೇವೆ. ಮುಂದೆ ನಿರ್ಧಾರ ಕೈಗೊಳ್ಳುತ್ತೇವೆ ಈಗ ನೀವು ಸುಮ್ಮನಿರಿ' ಎಂದು ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.