ಚಾಮರಾಜನಗರ: ಕಾಂಗ್ರೆಸ್‌ನ ಕೆ.ಎಸ್.ಮಹೇಶ್ ಅವರ ರಾಜೀನಾಮೆಯಿಂದ ತೆರವಾಗಿರುವ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನವರೇ ಆದ ಶಶಿಕಲಾ ಅವರ ಆಯ್ಕೆ ಖಚಿತವಾಗಿದೆ.

ಮಂಗಳವಾರ ಮಧ್ಯಾಹ್ನ ಒಂದು ಗಂಟೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.

23 ಸದಸ್ಯ ಬಲದ ಜಿಲ್ಲಾ ಪಂಚಾಯಿತಿಯಲ್ಲಿ 14 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ ಆರು ಸ್ಥಾನಗಳನ್ನು ಹೊಂದಿದೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು. ಪಕ್ಷದಲ್ಲಿ ಹೆಚ್ಚು ಪೈಪೋಟಿ ಇದ್ದುದರಿಂದ ವರಿಷ್ಠರು ತಲಾ 15 ತಿಂಗಳ ಅವಧಿಗೆ ನಾಲ್ವರು ಉಪಾಧ್ಯಕ್ಷರನ್ನಾಗಿ ಮಾಡುವ ತೀರ್ಮಾನ ಕೈಗೊಂಡಿದ್ದರು. ಅದರಂತೆ ಆಂತರಿಕ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮೊದಲ ಅವಧಿಗೆ ಬಸವರಾಜು, ಎರಡನೇ ಅವಧಿಗೆ ಯೋಗೇಶ್ ಹಾಗೂ ಮೂರನೇ ಅವಧಿಗೆ ಕೆ.ಎಸ್.ಮಹೇಶ್ ಉಪಾಧ್ಯಕ್ಷರಾಗಿದ್ದರು.

ಪಕ್ಷದಲ್ಲಿ ನಡೆದಿರುವ ಆಂತರಿಕ ಒಪ್ಪಂದದಂತೆ ನಾಲ್ಕನೇ ಅವಧಿಗೆ ಶಶಿಕಲಾ ಅವರು ಉಪಾಧ್ಯಕ್ಷರಾಗಲಿದ್ದಾರೆ. ಜಿಲ್ಲಾ ಪಂಚಾಯಿತಿಯ ಈ ಅವಧಿ 2021ರ ಏಪ್ರಿಲ್ 30ರವೆಗೆ ಇದೆ.

ಮುಂಜಾಗ್ರತಾ ಕ್ರಮ ಪಾಲನೆ: ‘ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಹರಡುವಿಗೆ ತಡೆಗಾಗಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ರಾಜಕೀಯ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಜಿಲ್ಲಾಡಳಿತ ಭವನದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಸಂಭ್ರಮ ಆಚರಿಸುವುದನ್ನು ನಿಷೇಧಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.