ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಸೋಮವಾರ ನಗರದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಲಾಯಿತು.

ಬಳಿಕ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು

ಪ್ರತಿಭಟನೆಯಲ್ಲಿ ಸಂಸದ ಸುನೀಲ್ ಬೋಸ್, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.