ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆ ಸೋಮವಾರ (ಮೇ 8) ಸಂಜೆ 6 ಗಂಟೆಯಿಂದ ಮೇ 10ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ಕೆಲ ಷರತ್ತುಗಳನ್ನು ವಿಧಿಸಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಶನಿವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಚುನಾವಣಾ ಆಯೋಗವು ಸ್ಪಷ್ಟಪಡಿಸಿರುವಂತೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಆದೇಶದಂತೆ ಮನೆ ಮನೆ ಪ್ರಚಾರಕ್ಕೆ ನಿರ್ಬಂಧವಿಲ್ಲ.

ಶಸ್ತ್ರ, ಬಡಿಗೆ, ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತಗಟ್ಟೆಗಳ 100 ಮೀಟರ್ ಒಳಗೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಂಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಮುಟ್ಟುಗೋಲು ಹಾಕಲಾಗುವುದು. ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಆದೇಶ ಅನ್ವಯಿಸುವುದಿಲ್ಲ. ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.