ಹನೂರು (ಚಾಮರಾಜನಗರ ಜಿಲ್ಲೆ): ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದಲ್ಲಿ ಮತ್ತೋಂದು ಆನೆಯ ಮೃತದೇಹ ಶನಿವಾರ ಪತ್ತೆಯಾಗಿದೆ.

ಕೆಲವು ದಿನಗಳ ಹಿಂದಷ್ಟೆ ಬೈಲೂರು ಮತ್ತು ಯಳಂದೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಶವ ಪತ್ತೆಯಾಗಿತ್ತು.

ನಿರಂತರವಾಗಿ ಆನೆಗಳ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯಾಚರಣೆ ಚುರುಕುಗೊಳಿಸಿದಾಗ ಮುಳ್ಳಿನ ಪೊದೆಯೊಳಗೆ ಕೊಳೆತ ಸ್ಥಿತಿಯಲ್ಲಿ ಆನೆಯ ಕಳೇಬರ ಪತ್ತೆಯಾಗಿದೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ಆನೆಯ ಶವಪರೀಕ್ಷೆ ನಡೆಸಲಾಗಿದ್ದು ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ವಾರದಲ್ಲಿ ಮೂರು ಆನೆಗಳ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆಯೇ ಅಥವಾ ಆನೆಗಳಿಗೆ ವಿಷ ಇಕ್ಕಲಾಗುತ್ತಿದೆಯೇ ಎಂಬ ಅನುಮಾನಗಳು ಮೂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.