ಹನೂರು: ನೀರು ಮತ್ತು ಆಹಾರ ಅರಸಿ ಬಂದಿದ್ದ ಜಿಂಕೆಯೊಂದುತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಶನಿವಾರ ಮುಂಜಾನೆ ಬೀದಿನಾಯಿಗಳ ದಾಳಿಗೆ ತುತ್ತಾಗಿ ಮೃತಪಟ್ಟಿದೆ.

ಶನಿವಾರ ಬೆಳಿಗ್ಗೆ ಜಮಿನಿಗೆ ನೀರು ಕುಡಿಯಲು ಬಂದಾಗ ಬೀದಿನಾಯಿಗಳ ಹಿಂಡು ಹಿಂಬಾಲಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಏಕಾಏಕಿ ನಾಯಿಗಳು ದಾಳಿ ನಡೆಸಿವೆ. ಬಳಿಕ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಗೆ ಗ್ರಾಮಸ್ಥರು ನೀರು ಕುಡಿಸಿ ಸಂತೈಸಿದ್ದಾರೆ. ಆದರೆ ಜಿಂಕೆ ಬದುಕುಳಿಯಲಿಲ್ಲ.

ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಮಹಜರು ನಡೆಸಿ ಜಿಂಕೆ ಕಳೇಬರವನ್ನು ತೆಗೆದುಕೊಂಡು ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.