ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

MUDA | ಸಿಎಂ ವಿರುದ್ಧ ಎಫ್‌ಐಆರ್ ದಾಖಲು ಹೋರಾಟಕ್ಕೆ ಸಂದ ಜಯ: ಸ್ನೇಹಮಯಿ ಕೃಷ್ಣ

Published : 27 ಸೆಪ್ಟೆಂಬರ್ 2024, 12:35 IST
Last Updated : 27 ಸೆಪ್ಟೆಂಬರ್ 2024, 12:35 IST
ಫಾಲೋ ಮಾಡಿ
Comments

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿರುವುದು ಪ್ರಾಮಾಣಿಕ ಹೋರಾಟಕ್ಕೆ ಸಂದ ಜಯ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದರು.

ಚಾಮರಾಜನಗರದ ಕರುಣಾಕರ ಎಂಬುವರಿಗೆ ಹಣ ವಂಚನೆ ಎಸಗಿದ ಪ್ರಕರಣ ಸಂಬಂಧ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದ ಬಳಿಕ ಮಾತನಾಡಿದ ಸ್ನೇಹಮಯಿ ಕೃಷ್ಣ, ‘ಒಬ್ಬ ಸಾಮಾನ್ಯ ಪ್ರಜೆಯೂ ರಾಜ್ಯದ ಮುಖ್ಯಮಂತ್ರಿ ವಿರುದ್ದ ಕಾನೂನು ಹೋರಾಟ ಮಾಡಬಹುದು ಎಂಬುದು ಪ್ರಕರಣದಿಂದ ಸಾಬೀತಾಗಿದೆ’ ಎಂದರು.

‘ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಲೋಕಾಯುಕ್ತ ಎಸ್‌ಪಿ ಉದೇಶ್ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿಗಳ ಒತ್ತಡ ಹಾಗೂ ಆದೇಶದ ಬಳಿಕವಷ್ಟೆ ಎಫ್‌ಐಆರ್‌ ಮಾಡಿದ್ದು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡಲಾಗುವುದು. ಈ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸ್ನೇಹಮಹಿ ಕೃಷ್ಣ ತಿಳಿಸಿದರು.

‘ಅನ್ಯರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಾಗ ರಾಜೀನಾಮೆಗೆ ಪಟ್ಟುಹಿಡಿಯುತ್ತಿದ್ದ ಸಿದ್ದರಾಮಯ್ಯ ತಮ್ಮ ವಿರುದ್ಧವೇ ದೂರು ದಾಖಲಾದಾಗ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟುಹಿಡಿಯುವುದು ವಿಪರ್ಯಾಸ. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT