ಚಾಮರಾಜನಗರ: ಸಮೀಪದ ಯಡಬೆಟ್ಟ ಪ್ರದೇಶದ ಗುಡ್ಡವೊಂದಕ್ಕೆ ಭಾನುವಾರ ಮಧ್ಯಾಹ್ನ ಬೆಂಕಿ ಬಿದ್ದಿದ್ದು, ಹತ್ತಾರು ಎಕರೆ ಪ್ರದೇಶ ಸುಟ್ಟು ಹೋಗಿದೆ.

ವೈದ್ಯಕೀಯ ಕಾಲೇಜಿನ ಹಿಂಭಾಗದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಹಾಗೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸಲು ಪ್ರಯತ್ನ ನಡೆಸಿದರು.

ಈ ಭಾಗದಲ್ಲಿ ದೊಡ್ಡ ಮರಗಳು ಇಲ್ಲ. ಕುರುಚಲು ಗಿಡಗಳು ಹಾಗೂ ಹುಲ್ಲು ಇವೆ. ಇಲ್ಲಿನ ಗುಡ್ಡಗಳಿಗೆ ಪ್ರತಿ ವರ್ಷ ಬೇಸಿಗೆಯಲ್ಲಿ ಬೆಂಕಿ ಬೀಳುತ್ತದೆ.

ಭಾನುವಾರ ಮಧ್ಯಾಹ್ನ ಬಿದ್ದ ಬೆಂಕಿ, ರಾತ್ರಿವರೆಗೂ ನಿಯಂತ್ರಣಕ್ಕೆ ಬಂದಿರಲಿಲ್ಲ.

‘ಕಂದಾಯ ಇಲಾಖೆಗೆ ಸೇರಿದ ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯೂ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಶೀಘ್ರದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರುತ್ತೇವೆ’ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.