ಗುಂಡ್ಲುಪೇಟೆ: ಜಿಂಕೆ ಮಾಂಸ ಸಾಗಣೆ ಮಾಡುತ್ತಿದ್ದ ಐದು ಮಂದಿ ಆರೋಪಿಗಳನ್ನು ಹುಲಿ ಸಂರಕ್ಷಣಾ ವಿಶೇಷ ದಳದ (ಎಸ್ಟಿಪಿಎಫ್) ಸಿಬ್ಬಂದಿ ಬಂಧಿಸಿದ್ದಾರೆ.

ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದ ರವಿ, ಸಿದ್ದಶೆಟ್ಟಿ, ಸಿದ್ದರಾಜು, ಮಹೇಶ ಹಾಗೂ ಪಂಜನಹಳ್ಳಿ ಗ್ರಾಮದ ಸುರೇಶ ಬಂಧಿತರು. ಆರೋಪಿಗಳು ಶಿವಪುರ-ಗುಂಡ್ಲುಪೇಟೆ ಮಾರ್ಗದ ಕಲ್ಲುಕಟ್ಟೆ ಡ್ಯಾಂ ಬಳಿ ಮೂರು ಬೈಕ್ಗಳಲ್ಲಿ ಬರುತ್ತಿದ್ದ ವೇಳೆ ಎಸ್ಟಿಪಿಎಫ್ ಸಿಬ್ಬಂದಿ ಪರಿಶೀಲಿಸಿದಾಗ ಮಾಂಸ ಪತ್ತೆಯಾಗಿದ್ದು, ಎಲ್ಲರನ್ನೂ ಬಂಧಿಸಿದ್ದಾರೆ. ಕಡಬೂರು-ಚಿರಕನಹಳ್ಳಿ ಗ್ರಾಮದ ಬಳಿಯ ಕೆರೆಯ ಬಳಿ ಜಿಂಕೆಯನ್ನು ಬಂದೂಕಿನಿಂದ ಬೇಟೆಯಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

‘ಬಂಧಿತರಿಂದ 40 ಕೆ.ಜಿ ಜಿಂಕೆ ಮಾಂಸ, ಒಂಟಿ ನಳಿಕೆ ನಾಡ ಬಂದೂಕು, ಕತ್ತಿ ಮತ್ತು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಗುಂಡ್ಲುಪೇಟೆ ಬಫರ್ ವಲಯದಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಜಿಂಕೆಯ ಮಾಂಸವನ್ನು ನಿಯಮಾನುಸಾರ ವಿಲೇ ಮಾಡಲಾಗಿದೆ’ ಎಂದು ಎಸ್ಟಿಪಿಎಫ್ ಪ್ರಭಾರ ಆರ್ಎಫ್ಒ ಕಿರಣ್ ಕುಮಾರ್ ಮಾಹಿತಿ ನೀಡಿದರು.

ಬಂಡೀಪುರ ಹುಲಿ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಮಾರ್ಗದರ್ಶನದಲ್ಲಿ ಹುಲಿ ಸಂರಕ್ಷಣಾ ವಿಶೇಷ ದಳದ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಬಿ.ಎಸ್, ಕಾರ್ತಿಕ್ ಸುರಪುರ್, ಶ್ರೀಪಾಲ್, ರಮೇಶ ಎಸ್ ಮಠಪತಿ, ಮಹೇಶ ಎನ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.