ಚಾಮರಾಜನಗರ: ಪಿಯುಸಿ ವಾರ್ಷಿಕ ಪರೀಕ್ಷೆಯ ಮೊದಲ ದಿನ ಕನ್ನಡ ಪರೀಕ್ಷೆ ಬರೆಯಲು ಹೊರಟವನ ಕಾಲೆಳೆಯುವ ರೀತಿಯಲ್ಲಿ ಶುಭಾಶಯ ಕೋರುವ ಫ್ಲೆಕ್ಸ್ ನಗರದಲ್ಲಿ ಶುಕ್ರವಾರ ಕಂಡು ಬಂದಿದ್ದು, ಎಲ್ಲರ ಗಮನ ಸೆಳೆಯಿತು.

ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಪರೀಕ್ಷೆ ಬರೆಯಲು ಹೊರಟ ಅಭ್ಯರ್ಥಿಯ ಸ್ನೇಹಿತರು ಫ್ಲೆಕ್ಸ್ ಅಳವಡಿಸಿದ್ದಾರೆ ಎನ್ನಲಾಗಿದೆ.

ಸ್ನೇಹಿತನ ಫೋಟೊ ಹಾಕಿ, ಇತ್ತೀಚೆಗೆ ಟ್ರೆಂಡ್ ಆಗಿರುವ ‘ಬೆಳ್ಳುಳ್ಳಿ ಕಬಾಬ್’ ಎಂಬ ಶೀರ್ಷಿಕೆ ನೀಡಲಾಗಿದೆ. ‘ನಮ್ ಮನ್ಸು ನಮ್ಗೆ ಒಳ್ಳೆದ್ ಮಾಡಿದ್ರೆ, ದೇವ್ರು ಈ ಎಕ್ಸಾಮ್ ಎಲ್ಲಾ ಏನಿಕ್ಕೆ’ ಎಂಬ ಒಕ್ಕಣೆಯೂ ಫ್ಲೆಕ್ಸ್‌ನಲ್ಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಫ್ಲೆಕ್ಸ್ ಫೋಟೊ ಹರಿದಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.