ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿ, ಎರಡನೇ ಬಾರಿ ವೇತನ ಆಯೋಗದ ಅವಧಿಯನ್ನು ವಿಸ್ತರಿಸಿ 13 ತಿಂಗಳಾದರೂ ವರದಿಯನ್ನು ಸರ್ಕಾರಕ್ಕೆ ನೀಡಿಲ್ಲ. ಅಂದಿನ ಸರ್ಕಾರದ ಮುಖ್ಯಮಂತ್ರಿಯವರು ಈ ಹಿಂದೆ 6ನೇ ವೇತನ ಆಯೋಗವನ್ನು ರಚಿಸಿ, ಎಂಟು ತಿಂಗಳ ಅಲ್ಪಾವಧಿಯಲ್ಲಿ ವರದಿಯನ್ನು ಆಯೋಗದಿಂದ ಪಡೆದು ವಿಳಂವಿಲ್ಲದೇ ರಾಜ್ಯ ಸರ್ಕಾರಿ ನೌಕರರಿಗೆ ಅನಿಕೂಲ ಮಾಡಿಕೊಟ್ಟದ್ದರು. ಆದರೆ 7ನೇ ವೇತನ ಆಯೋಗದ ಅವಧಿಯನ್ನು 2 ಬಾರಿ ವಿಸ್ತರಿಸಿರುವುದರಿಂದ ಸರ್ಕಾರಿ ನೌಕರರಲ್ಲಿ ಆಯೋಗದ ಜಾರಿ ಬಗ್ಗೆ ಅನಿಶ್ಚಿತತೆ ಉಂಟಾಗಿದೆ’ ಎಂದರು.

‘ರಾಜ್ಯ ಸರ್ಕಾರ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು, ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್.) ಅನುಷ್ಠಾನಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಆರ್.ಎನ್.ನಂಜುಂಡಸ್ವಾಮಿ, ಮಹದೇವಯ್ಯ, ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಮಾದಪ್ಪ, ಪ್ರದಾನ ಕಾರ್ಯದರ್ಶಿ ಮಹದೇವಸ್ವಾಮಿ, ಪ್ರದೀಪ್ಕುಮಾರ್, ಸೈಮನ್, ವಿವಿಧ ಜಿಲ್ಲಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಸರ್ಕಾರಿ ನೌಕರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.