ಗುಂಡ್ಲುಪೇಟೆ: ಪಟ್ಟಣದ ಪುರಸಭೆ ಸದಸ್ಯರು ರೆಸಾರ್ಟ್ ಒಂದರಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೊ ತುಣುಕುಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿವೆ.

ಫೆ.25ರಂದು ಪುರಸಭೆಯಲ್ಲಿ ಬಜೆಟ್ ಮಂಡನೆ ಇತ್ತು. ಬಜೆಟ್ ಸಭೆ ಮುಗಿದ ನಂತರ, ಮಹಿಳಾ ಸದಸ್ಯರನ್ನು ಬಿಟ್ಟು, ಅಧ್ಯಕ್ಷ ಗಿರೀಶ್ ಸೇರಿದಂತೆ ಎಲ್ಲ ಪಕ್ಷಗಳ ಸದಸ್ಯರು ತಿ.ನರಸೀಪುರ ತಾಲ್ಲೂಕಿನಲ್ಲಿರುವ ಖಾಸಗಿ ರೆಸಾರ್ಟ್ಗೆ ಹೋಗಿದ್ದರು ಎಂದು ತಿಳಿದುಬಂದಿದೆ.

ಡಿಜೆ ಹಾಡಿಗೆ ಸದಸ್ಯರೆಲ್ಲರೂ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಕೆಲವು ಸದಸ್ಯರು, ತಮ್ಮ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಚಿತ್ರ ಹಾಗೂ ವಿಡಿಯೊಗಳನ್ನು ಹಾಕಿಕೊಂಡಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪುರಸಭೆ ಅಧ್ಯಕ್ಷ ಗಿರೀಶ್ ಅವರಿಗೆ ದೂರವಾಣಿ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.