ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದಾಗ ಶಾಲಾ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿದ್ದಾಳೆ.

ಪಟ್ಟಣದ ನಿರ್ಮಲ ಕಾನ್ವೆಂಟ್‌ನಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ (15) ಮೃತಪಟ್ಟ ವಿದ್ಯಾರ್ಥಿನಿ.

ಸಿಎಂಎಸ್ ಅನಾಥಾಲಯದಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆಗೆ ನಡೆಸಿದಾಗಲೇ ಆಕೆ ಕೊನೆಯುಸಿರೆಳೆದಿದ್ದಳು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಫಿಲಿಶ ಬೆಂಗಳೂರಿನ ನಿವಾಸಿಯಾಗಿದ್ದು, ಆಕೆಯ ತಂದೆ ಐದಾರು ವರ್ಷಗಳಿಂದ ವ್ಯಾಸಂಗಕ್ಕಾಗಿ ಪಟ್ಟಣದ ಸಿಎಂಎಸ್ ಅನಾಥಾಲಯಕ್ಕೆ ತಂದು ಬಿಟ್ಟಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ.

‘ಬಾಲಕಿ ಆರೋಗ್ಯವಾಗಿದ್ದಳು. ಧಿಡೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.