ಗುಂಡ್ಲುಪೇಟೆ: ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಲಯದಲ್ಲಿ ಡಿ. 9ರಂದು ಮೆಗಾ ಲೋಕ ಅದಾಲತ್ ನಡೆಯಲಿದೆ.

ಜೆ.ಎಂ.ಎಫ್.ಸಿ ಹಿರಿಯ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಳವಾರ್ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಕುಮಾರ ಜಿ.ಜೆ ನೇತೃತ್ವದಲ್ಲಿ ಡಿ.9ರಂದು ಲೋಕ್ ಅದಾಲತ್ ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಬೈಟಕ್‍ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಲೋಕ ಅದಾಲತ್‍ನ್ನು ನಡೆಸಲಾಗುತ್ತದೆ.

ಹಿಂದಿನ ಲೋಕ್ ಅದಾಲತ್ ಅನ್ನು ವಕೀಲರು, ಕಕ್ಷಿದಾರರು, ವಿಮಾ ಕಂಪನಿಗಳು, ವಿವಿಧ ಇಲಾಖೆಯ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಿ ಹಲವಾರು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿತ್ತು. ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಗುರಿ ಹೊಂದಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.