ಕೊಳ್ಳೇಗಾಲ: ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ಹನೂರು ತಾಲ್ಲೂಕಿನ ಪಾಲಾರ್ ಹಾಗೂ ಸುತ್ತಲಿನ ಪೋಡುಗಳ 50ಕ್ಕೂ ಹೆಚ್ಚು ಮಂದಿ ಅರಣ್ಯವಾಸಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.

ಅರಣ್ಯವಾಸಿ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ನಾಗೇಂದ್ರ ಮಾತನಾಡಿ, ‘ಗಡಿಭಾಗದ ಪಾಲರ್ ಹಾಗೂ ಪೋಡುಗಳಿಗೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಕೆಲ ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೆ ಜನಸಾಮಾನ್ಯರು ಕಷ್ಟಪಡುತ್ತಿದ್ದಾರೆ. ವಿದ್ಯುತ್ ಕಲ್ಪಿಸದಿದ್ದರೆ ಉಪವಾಸ ಮಾಡಿ ಸಾಯುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸೆಸ್ಕ್ ಇಇ ತಬಸ್ಸುಮ್ ಅಬ್ಜ್, ಸಮಸ್ಯೆ ಬಗೆಹರಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಪರಿಕರಗಳನ್ನು ಕಳುಹಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.

ಪ್ರತಿಭಟನೆಯಲ್ಲಿ ರಾಮನಗರ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಜ್ವಲ್, ಪ್ರವೀಣ್, ಮೇಫೂಜ್, ಎಸ್‌ಡಿಪಿಐ ಟೌನ್ ಅಧ್ಯಕ್ಷ ಜಾಕೀರ್ ಪಾಷ, ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಕಲೀಲ್, ಪಾಲರ್ ಗ್ರಾ.ಪಂ ಉಪಾಧ್ಯಕ್ಷ ಕೆಂಪಾರ, ಸದಸ್ಯರಾದ ಮಾದೇವಿ, ಮಹದೇವ, ಸಿದ್ದಮರಿ, ಕೆಂಪಮ್ಮ, ಲಕ್ಷ್ಮಿ, ಈರಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.