ಕೊಳ್ಳೇಗಾಲ: ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿ ಆಕೆಯ ಬೆರಳನ್ನು ಕತ್ತರಿಸಿದ ಪತಿಗೆ ಇಲ್ಲಿನ ನ್ಯಾಯಾಲಯವು ಶುಕ್ರವಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ₹1.35 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

ತಾಲ್ಲೂಕಿನ ಧನಗೆರೆ ಗ್ರಾಮದ ಮಹದೇವ ಶಿಕ್ಷೆಗೆ ಒಳಗಾದವರು. 2017ರ ಆಗಸ್ಟ್ 31ರಂದು ಈ ಘಟನೆ ನಡೆದಿತ್ತು.

ಮಹದೇವ ಅವರು ಅದೇ ಗ್ರಾಮದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು. ಇದನ್ನು ತಿಳಿದ ಪತ್ನಿ ಮಂಜುಳಾ, ಮಹದೇವ ಅವರನ್ನು ಪ್ರಶ್ನಿಸಿದ್ದರು. ಇದರಿಂದಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಒಂದು ದಿನ ಜಗಳ ನಡೆಯುತ್ತಿದ್ದಾಗ ಮಹದೇವ ಅವರು ಕೋಪದಿಂದ ಮಂಜುಳಗೆ ಹೊಡೆದು ಅವರ ಬಲಗೈಯ ಹೆಬ್ಬೆರಳನ್ನು ಕುಡುಗೋಲಿನಿಂದ ಕತ್ತರಿಸಿದ್ದರು. ಜಗಳವನ್ನು ಬಿಡಿಸಲು ಬಂದಿದ್ದ ಮಂಜುಳಾ ತಾಯಿಯ ಮೇಲೂ ಹಲ್ಲೆ ಮಾಡಿದ್ದರು.

2017ರ ಆಗಸ್ಟ್ 31ರಂದು ಮಂಜುಳಾ ಅವರು ಕೊಳ್ಳೇಗಾಲದ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಅಂದಿನ ಸಬ್ ಇನ್ಸ್ಪೆಕ್ಟರ್ ಆಗಿದ್ದ ವನರಾಜು ಅವರು ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದರು. ಆರೋಪಿ ವಿರುದ್ಧ ಇಲ್ಲಿನ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ವಿನಯ್ ಅವರು ಮಹದೇವ ಅವರು ತಪ್ಪಿತಸ್ಥ ಎಂದು ಘೋಷಿಸಿದ್ದು, ಐದು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹1.35 ಲಕ್ಷ ದಂಡ ವಿಧಿಸಿ ಆದೇಶ ಹೊರಡಿದ್ದಾರೆ.ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಷಾ ಅವರು ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.