ಚಾಮರಾಜನಗರ: ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಪುಟ್ಟಸ್ವಾಮಿ ಸೇರಿದಂತೆ ರಾಜ್ಯದ 19 ಮಂದಿ ಪೊಲೀಸರು ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಪೊಲೀಸರು ಸಲ್ಲಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆ ಮಾಡಲಾಗುತ್ತದೆ.

ಪುಟ್ಟಸ್ವಾಮಿ ಅವರುಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ, ಚಾಮರಾಜನಗರ ಪೂರ್ವ ಠಾಣೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ, ಜಿಲ್ಲಾ ಸೈಬರ್ ಅಪರಾಧ, ಆರ್ಥಿಕ ಮತ್ತು ಮಾದಕದ್ರವ್ಯ ನಿಗ್ರಹ ಠಾಣೆಯ ಇನ್ಸ್ಪೆಕ್ಟರ್ ಆಗಿ ಅವರು ಸೇವೆ ಸಲ್ಲಿಸಿದ್ದಾರೆ.

ಕಳೆದ ವರ್ಷದ ಮೇನಲ್ಲಿ ಅವರು ಸಬ್ ಇನ್ಸ್ಪೆಕ್ಟರ್ ಹುದ್ದೆಯಿಂದ ಇನ್ಸ್ಪೆಕ್ಟರ್ ಆಗಿ ಬಡ್ತಿಹೊಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.