ಕೊಳ್ಳೇಗಾಲ: ‘ಕನ್ನಡ ಅಸ್ಮಿತೆ ಬೀಜ ಬಿತ್ತಿದ್ದ ಕದಂಬ ದೊರೆ ಮಯೂರ ವರ್ಮ’ ಎಂದು ಮಹದೇಶ್ವರ ಪ್ರೌಢಶಾಲೆ ಉಪನ್ಯಾಸಕ ಮಯೂರ ಹೇಳಿದರು.

ತಾಲ್ಲೂಕಿನ ಕಾಮಗೆರೆ ಗ್ರಾಮದ ಮಹದೇಶ್ವರ ಪ್ರೌಢಶಾಲೆಯಲ್ಲಿ ಸೋಮವಾರ ಜೆಎಸ್ಬಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಕನ್ನಡ ಮಾಸಾಚರಣೆ 2024 ಕಾರ್ಯಕ್ರಮದಲ್ಲಿ ಕನ್ನಡ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

‘ಕನ್ನಡ ತನ್ನ ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ್ದ ಕರ್ನಾಟಕದ ಮೊದಲ ರಾಜ ಮಯೂರ ವರ್ಮ ಮತ್ತು ಬನವಾಸಿ ಕದಂಬರು ಕರ್ನಾಟಕದ ಮೊದಲ ರಾಜ ಮನೆತನ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ತಾಳಗುಂದದಲ್ಲಿ ಜನಿಸಿದ ಮಯೂರ ಶರ್ಮ, ಅಲ್ಲೇ ವಿದ್ಯಾಭ್ಯಾಸ ನಡೆಸಿ ಬಳಿಕ ಹೆಚ್ಚಿನ ಶಿಕ್ಷಣ ಪಡೆಯುವ ಹಂಬಲದಿಂದ ತನ್ನ ತಾತನ ಜೊತೆ ತಮಿಳುನಾಡಿನ ಕಂಚಿಗೆ ತೆರಳಿದ್ದರು. ಹೀಗೆ ಕನ್ನಡಕ್ಕೆ ತನ್ನದೇ ಆದ ಇತಿಹಾಸಗಳು ಇದೆ. ಹಾಗಾಗಿ ಕನ್ನಡಿಗರಾದ ನಾವು ಈ ರಾಜ್ಯದಲ್ಲಿ ಜನಿಸಿರುವುದು ನಮ್ಮ ಸೌಭಾಗ್ಯ ಎಂದರು.

ತಾಳಗುಂದ ಶಾಸನ ಹಲ್ಮಿಡಿಗಿಂತಲೂ ಪ್ರಾಚೀನ ಶಾಸನ: ತಾಳಗುಂದ ಒಂದು ಕಾಲದಲ್ಲಿ ಕದಂಬರ ಪ್ರಮುಖ ಕೇಂದ್ರವಾಗಿತ್ತು. ಅಲ್ಲಿನ ಸ್ತಂಭ ಶಾಸನ ಕನ್ನಡ ನಾಡನ್ನು ಆಳಿದ ಪ್ರಥಮ ಕನ್ನಡಿಗ ಅರಸನ ಬಗ್ಗೆ ಮಾಹಿತಿ ನೀಡುತ್ತದೆ. ತಾಳಗುಂದದ ಪ್ರಣವಲಿಂಗೇಶ್ವರ ದೇವಸ್ಥಾನದಲ್ಲಿ ಭಾರತೀಯ ಪುರಾತತ್ವ ಇಲಾಖೆ 2012ರಲ್ಲಿ ಉತ್ಖನನದಿಂದ ಪತ್ತೆಯಾದ ಶಾಸನ, ಕ್ರಿಶ 450 ರಲ್ಲಿ ರಚನೆಯಾದ ಹಲ್ಮಿಡಿ ಶಾಸನಕ್ಕಿಂತಲೂ ಕನ್ನಡದ ಅತ್ಯಂತ ಪ್ರಾಚೀನ ಶಾಸನ ಎಂದು ತಿಳಿದು ಬಂದಿದೆ ಎಂದರು.

ನಂತರ ಜೆಎಸ್'ಬಿ ಪ್ರತಿಷ್ಠಾನದ ಅಧ್ಯಕ್ಷ ಎಸ್.ಶಶಿಕುಮಾರ್ ಮಾತನಾಡಿ, ‘ಕನ್ನಡ ನಮ್ಮ ಅಸ್ಮಿತೆ, ನಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ ಇದನ್ನು ತಡೆದು ನಿಲ್ಲಿಸಬೇಕು. ಕನ್ನಡಿಗರು ತಮ್ಮ ಸ್ವಂತಿಕೆ ಬಳಸಬೇಕು’ ಎಂದರು.

ಕಾರ್ಯಕ್ರಮ ನಿಮಿತ್ತ ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಪುಸ್ತಕ ಬಹುಮಾನ, ಜೊತೆಗೆ ಶಾಲೆಯ ಎಲ್ಲಾ ಮಕ್ಕಳಿಗೆ ಕನ್ನಡ ಕಿರುಪುಸ್ತಕ ನೀಡಿ, ಕನ್ನಡ ಓದನ್ನು ಪ್ರೋತ್ಸಾಹಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಗಿರಿಜಾಂಬ, ಸಹ ಶಿಕ್ಷಕ ಉಮೇಶ, ಶಶಿಕಲಾ, ಮಮತ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.