ಯಳಂದೂರು: ತಾಲ್ಲೂಕಿನ ಬಿಳಿಗಿರಿಬೆಟ್ಟದ ಮಾರಿಗುಡಿ ಬಳಿಯ ಆದಿವಾಸಿ ಆರೋಗ್ಯ ಸಂಪನ್ಮೂಲ ಕೇಂದ್ರದಲ್ಲಿ ಆ.25ರ ಭಾನುವಾರ ಕಾನು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ದಕ್ಷಿಣ ಭಾರತ ಆದಿವಾಸಿ ಜ್ಞಾನ ಕೇಂದ್ರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಸುತ್ತಮುತ್ತಲ ಸೋಲಿಗ ಜನಾಂಗದ ಜ್ಞಾನ ಪರಂಪರೆ, ನೈಪುಣ್ಯತೆ, ಕಲೆ, ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆ ಚರ್ಚೆ ನಡೆಯಲಿದೆ. ಹಾಡಿಗಳ ಇತಿಹಾಸ, ಅರಣ್ಯ ಆಧಾರಿತ ಕೃಷಿ, ಕಟ್ಟುಪಾಡು, ಸಾಮಾಜಿಕ ವ್ಯವಸ್ಥೆ ಮೊದಲಾದ ಸಂಕೀರ್ಣ ವ್ಯವಸ್ಥೆಗಳ ಬಗ್ಗೆ ಬಂದಿರುವ ಪ್ರಕಟಣೆಗಳ ಬಗ್ಗೆ ತಿಳಿಸಲಾಗುತ್ತದೆ.

ಈವರೆಗೆ ಸೋಲಿಗರ ಬಗೆಗಿನ ಮೂಲ ಜ್ಞಾನ ಪರಂಪರೆ, ಮೂಲ ಶಿಕ್ಷಣ, ಮಾಹಿತಿ, ಪುಸ್ತಕ, ಲೇಖನ, ಬ್ಲಾಗ್‌ಗಳ ಬಗ್ಗೆ ತಜ್ಞರು ಮಾತನಾಡಲಿದ್ದಾರೆ ಎಂದು ಜಿಲ್ಲಾ ಬುಟಕಟ್ಟು ಸಂಘದ ಕಾರ್ಯದರ್ಶಿ ಸಿ.ಮಾದೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.