ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಶೀಘ್ರದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಸ್ವತಃ ಎನ್.ಮಹೇಶ್ ಅವರು ಇದನ್ನು ‘ಪ್ರಜಾವಾಣಿ’ಗೆ ದೃಢಪಡಿಸಿದ್ದಾರೆ.

ಗುಂಡ್ಲುಪೇಟೆಗೆ ಶುಕ್ರವಾರ ಬಂದಿದ್ದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಎನ್.ಮಹೇಶ್ ಅವರು ಮಾತುಕತೆ ನಡೆಸಿದ್ದಾರೆ.ಯಾವುದೇ ಷರತ್ತುಗಳಿಲ್ಲದೇ ಬಿಜೆಪಿಗೆ ಸೇರುತ್ತೇನೆ ಎಂದು ಅವರು ಹೇಳಿದ್ದಾರೆ.

‘ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿ ಪಕ್ಷ ಸೇರುವಂತೆ ಅವರು ಸೂಚಿಸಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಬಳಿಯೂ ಈ ವಿಷಯವನ್ನು ಯಡಿಯೂರಪ್ಪ ಪ್ರಸ್ತಾಪಿಸಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರೊಂದಿಗೆ ಮಾತನಾಡಿ ದಿನಾಂಕ ನಿಗದಿ ಪಡಿಸುವಂತೆ ಕಟೀಲ್ ಅವರು ಸೂಚಿಸಿದ್ದಾರೆ’ ಎಂದು ಎನ್.ಮಹೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಸಂದರ್ಭದಲ್ಲಿ ಶಾಸಕ ಸಿ.ಎಸ್.ನಿರಂಜನಕುಮಾರ್, ವಿಜಯೇಂದ್ರ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಆರ್.ಸುಂದರ್ ಹಾಗೂ ಇತರ ಪದಾಧಿಕಾರಿಗಳೂ ಇದ್ದರು. ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅವರು ಹೇಳಿದ ದಿನ ಸೇರ್ಪಡೆಯಾಗುವೆ’ ಎಂದು ಅವರು ಹೇಳಿದರು.

ಈ ಬೆಳವಣಿಗೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್ ಅವರು, ‘ಯಡಿಯೂರಪ್ಪ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಚರ್ಚಿಸಲು ಶನಿವಾರ ಮುಖಂಡರ ಸಭೆ ಕರೆದಿದ್ದೇನೆ’ ಎಂದರು.

ಸಚಿವ ಸ್ಥಾನಕ್ಕೂ ಲಾಬಿ: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎನ್.ಮಹೇಶ್ ಅವರು ಲಾಬಿ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ. ಅವರು ಇನ್ನೂ ಬಿಜೆಪಿಗೆ ಸೇರ್ಪಡೆಯಾಗದಿರುವುದು ಸಚಿವಸ್ಥಾನ ಸಿಗುವುದಕ್ಕೆ ಅಡಚಣೆಯಾಗಿದೆ ಎಂದು ಅವರ ಆಪ್ತರು ಹೇಳುತ್ತಿದ್ದಾರೆ.

ಇದನ್ನೂ ಓದಿ... ಪಕ್ಷ ಬಲಪಡಿಸಲು ರಾಜ್ಯದಾದ್ಯಂತ ಪ್ರವಾಸ: ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.