ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): 'ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮಂಗಳವಾರ ಆಯೋಜಿಸಿದ್ದ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ₹ 443.64 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ಮಾತನಾಡಿದರು.

'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆಯೆಂದು ಬಿಜೆಪಿಯವರು ಸುಳ್ಳು ಪ್ರಕರಣವನ್ನು ದಾಖಲಿಸಿದ್ದರು. ನಾಗೇಂದ್ರ ಅವರೂ ಜಾಮೀನಿನಿಂದ ಹೊರಬಂದಿದ್ದಾರೆ. ಉಪ ಚುನಾವಣೆ ಮುಗಿದ ನಂತರ ಅವರಿಗೆ ಸಚಿವ ಸ್ಥಾನ ಕೊಡಬೇಕು. ಕೊಡುವೆ' ಎಂದರು.

ಸಿ.ಅನಿಲ್ ಕುಮಾರ್ ಅವರಿಗೂ ಸಚಿವಸ್ಥಾನ ನೀಡಬೇಕೆಂಬ ಬೇಡಿಕೆ ವೇದಿಕೆಯಿಂದ ಬಂದಾಗ, ರಾಜನಹಳ್ಳಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ, 'ನಾಗೇಂದ್ರ ಅವರಿಗೆ ಕೊಡಬೇಕಾಗಿದೆ. ನಾನು ಮಾತಿಗೆ ತಪ್ಪುವುದಿಲ್ಲ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.