ಕೊಳ್ಳೇಗಾಲ: ಕಾಂಗ್ರೆಸ್ ನೇತೃತ್ವದ ಸರ್ಕಾರ ಮಾತ್ರ ಬಡವರ ಪರ ಕಾಳಜಿ ಹೊಂದಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ನಗರದ ಈದ್ಗ ಮೊಹಲ್ಲಾ ಬಡಾವಣೆಯಲ್ಲಿ ಶನಿವಾರ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯೋಜಿಸಿದ್ದ ಕೇಂದ್ರ ಸರ್ಕಾರ ಅನುದಾನದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ‘ಸರ್ವರಿಗೂ ಸೂರು ಯೋಜನೆ ಅಡಿ’ ನಿರ್ಮಿಸಿದ ಮನೆಗಳು ಹಾಗೂ ನಿವೇಶನ ಹಕ್ಕು ಪತ್ರ ವಿತರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಸೂರು ಕಲ್ಪಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಇಂತಹ ಯೋಜನೆಯನ್ನು ಜಾರಿಗೊಳಿಸಿದೆ. ಇಂತಹ ಮಹತ್ವಾಕಾಂಕ್ಷೆ ಯೋಜನೆ ಜಾರಿಯಲ್ಲಿರುವುದು ಸಂತೋಷದ ವಿಷಯ. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ₹25 ಕೋಟಿ ಅನುದಾನ ನೀಡಿದ್ದಾರೆ. ವರ್ಷಗಳಿಂದ ನನೆಗುದ್ದಿಗೆ ಬಿದ್ದಿರುವ ಸಮುದಾಯ ಭವನಗಳು, ರಸ್ತೆಗಳು ಸೇರಿದಂತೆ ಅಭಿವೃದ್ಧಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. 19 ವರ್ಷ ವನವಾಸದಿಂದ ನೀವು ನನ್ನನ್ನು ವಿಧಾನಸಭೆಗೆ ಕಳುಹಿಸಿದ್ದೀರಿ ಹಾಗಾಗಿ ನಿಮ್ಮ ಬೇಡಿಕೆಗಳನ್ ಈಡೇರಿಸುತ್ತೇನೆ. ಈಗ 11 ಮನೆಗಳಿಗೆ ಹಕ್ಕು ಪತ್ರಗಳನ್ನು ನೀಡುತ್ತಿದ್ದೇನೆ ಎಂದರು.

ನಗರಸಭೆ ಸದಸ್ಯ ಸುಮೇರಾ ಬೇಗಂ, ಸುಶೀಲಾ, ಕವಿತಾ, ಶಾಂತರಾಜು, ಭಾಗ್ಯ, ರಾಘವೇಂದ್ರ, ಮುಖಂಡ ಅಕ್ಮಲ್ ಪಾಷ, ಪೌರಯುಕ್ತ ರಮೇಶ್, ಕೊಳಗೇರಿ ಅಭಿವೃದ್ಧಿ ಮಂಡಳಿ ಎಇಇ ರಾಮಚಂದ್ರ , ಬಡಾವಣೆ ನಿವಾಸಿಗಳು ಹಾಗೂ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.