ನಮ್ಮ ಸಿಬ್ಬಂದಿಗೂ ಕ್ಯಾಂಟೀನ್ ಸೌಲಭ್ಯ ಕಲ್ಪಿಸುವ ಪ್ರಸ್ತಾವ ಇಲಾಖೆಯಲ್ಲಿದೆ. ಸರ್ಕಾರಕ್ಕೆ ಕಳುಹಿಸಿದ್ದೇವೆ
ಬ್ರಿಜೇಶ್ ಕುಮಾರ್ ದೀಕ್ಷಿತ್ ಪಿಸಿಸಿಎಫ್ ಮತ್ತು ಅರಣ್ಯ ಪಡೆ ಮುಖ್ಯಸ್ಥ
ಕ್ಯಾಂಟೀನ್ ಸೌಲಭ್ಯದಿಂದ ಇಲಾಖೆಯ ಸಾವಿರಾರು ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಸರ್ಕಾರ ಶೀಘ್ರ ಅನುಷ್ಠಾನಗೊಳಿಸಬೇಕು
ಗಿರಿಧರ್ ಕುಲಕರ್ಣಿ ವನ್ಯಜೀವಿ ಸಂರಕ್ಷಣಾವಾದಿ
ಏನಿದು ತಮಿಳುನಾಡು ಮಾದರಿ?
ತಮಿಳುನಾಡಿನಲ್ಲಿ ಪೊಲೀಸ್ ಇಲಾಖೆಯಲ್ಲಿರುವ ಕ್ಯಾಂಟೀನ್ ಸೌಲಭ್ಯವನ್ನೇ ಅರಣ್ಯ ಇಲಾಖೆಯ ಸಿಬ್ಬಂದಿಗೂ ವಿಸ್ತರಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪೊಲೀಸ್ ಕ್ಯಾಂಟೀನ್‌ಗೆ ತೆರಳಿ ತಮಗೆ ಬೇಕಾದ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು. ಇದರಿಂದ ಅಲ್ಲಿನ ಸಾವಿರಾರು ಸಿಬ್ಬಂದಿಗೆ ಅನುಕೂಲವಾಗುತ್ತಿದೆ. ‘ಕ್ಯಾಂಟೀನ್ ಸೌಲಭ್ಯ ನೀಡಿದರೆ ಇಲಾಖೆಯ ಮುಂಚೂಣಿ ಸಿಬ್ಬಂದಿಯ ನೈತಿಕ ಸ್ಥೈರ್ಯ ಹೆಚ್ಚುತ್ತದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಬಲ್ಲುದು. ಮುಂಚೂಣಿ ಸಿಬ್ಬಂದಿಯ ಶ್ರೇಯೋಭಿವೃದ್ಧಿಗೆ ಇಲಾಖೆ ಬದ್ಧವಾಗಿದೆ ಎಂಬ ಸಂದೇಶವೂ ರವಾನೆಯಾಗುತ್ತದೆ’ ಎಂದು ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ್ ಕುಲಕರ್ಣಿ ಪ್ರತಿಪಾದಿಸಿದರು.