ಚಾಮರಾಜನಗರ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಿಲ್ಲ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸಂಘಟನೆಯ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೆಲಕಾಲ ರಸ್ತೆತಡೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಸ್.ವಿನಯ್ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿದರು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಕಾವಲುಪಡೆ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ನ ಅವರು ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ 11 ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಧ್ಯಕ್ಷ ಬಿ.ಎಸ್.ವಿನಯ್ ಕೆಲವು ಸಂಘಟನೆಗಳನ್ನು ಮಾತ್ರ ಆಹ್ವಾನಿಸಿ ಮಲತಾಯಿ ಧೋರಣೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಕಾವಲುಪಡೆ ಅಧ್ಯಕ್ಷ ಪರಶಿವಮೂರ್ತಿ,ಜಿ.ಎಂ.ಗಾಢ್ಕರ್, ಕಂಡಕ್ಟರ್ ಚಾ.ಸಿ.ಸೋಮನಾಯಕ, ಮುಖಂಡರಾದ ಸಂಘಸೇನ, ಕೆ.ಎಂ.ನಾಗರಾಜು, ರಾಮಸಮುದ್ರ ಸುರೇಶ್, ಕಾವಲುಪಡೆಯ ಅಬ್ದುಲ್ ಮಾಲಿಕ್, ರಾಜು, ಸಂತೋಷ್, ಸತ್ಯಮೂರ್ತಿ ಕುಮಾರ್, ಮೋಹನ್, ಶಿವಣ್ಣ, ಆಲೂರು ನಾಗೇಂದ್ರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.