ಚಾಮರಾಜನಗರ: ಕರ್ನಾಟಕ ವಿರೋಧಿ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಪೊರಕೆ, ಚಪ್ಪಲಿ ಚಳವಳಿ ನಡೆಸಿದರು.

ಚಾಮರಾಜೇಶ್ವರ ಉದ್ಯಾನವನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭನನಿರತರು ಅಲ್ಲಿ ರಸ್ತೆ ತಡೆ ನಡೆಸಿ, ಉದ್ಧವ್ ಠಾಕ್ರೆ, ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ರಾಜ್ಯದ ಸಂಸದರ ಸಭೆ ಕರೆದು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರಬೇಕಾದ ಪ್ರದೇಶವನ್ನು ರಾಜ್ಯಕ್ಕೆ ಬಿಡಿಸಿಕೊಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಹೇಳಿರುವುದು ವಿಷಾದಕರ ಸಂಗತಿ. ಇವರೊಬ್ಬ ಅವಿವೇಕ ಮುಖ್ಯಮಂತ್ರಿ. ಕನ್ನಡ ವಿರೋಧಿತನ ಪ್ರದರ್ಶಿಸಿದ್ದಾರೆ. ಎಂಇಎಸ್ ಪುಂಡರು ಕರ್ನಾಟಕ ಗಡಿಭಾಗದಲ್ಲಿ ಪುಂಡಾಟಿಕೆ ಮಾಡಿದ್ದಾರೆ. ಇವರ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ಹೂಡಬೇಕು’ ಎಂದು ಆಗ್ರಹಿಸಿದರು.

‘ಉದ್ಧವ್ ಠಾಕ್ರೆ ಪದೇ ಪದೇ ಉದ್ಧಟನದ ವರ್ತನೆ ತೋರುವುದು ಸರಿಯಲ್ಲ. ಈ ವಿಚಾರದಲ್ಲಿ ರಾಜ್ಯ ಸಂಸದರು ಮೌನವಹಿಸಿರುವುದು ನಾಚಿಗೇಡಿನ ಸಂಗತಿ. ಕೂಡಲೇ ರಾಜ್ಯ ಸರ್ಕಾರ ಇದರ ಬಗ್ಗೆ ಗಮನಹರಿಸಿ ಮಹಾಜನ ವರದಿ ಅಂತಿಮ ಎಂಬುದನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಮನವರಿಕೆ ಮಾಡಬೇಕು. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಒಂದು ಇಂಚು ಜಾಗವನ್ನೂ ಕೊಡಬಾರದು’ ಎಂದು ಆಗ್ರಹಿಸಿದರು.

ಚಾ.ವೆಂ.ರಾಜ್ ಗೋಪಾಲ್, ಕಂಡಕ್ಟರ್ ಚಾ.ಸಿ.ಸೋಮನಾಯಕ, ಗು.ಪುರುಷೋತ್ತಮ್, ಹ.ವಿ.ನಟರಾಜು, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ವೀರಭದ್ರ, ತಾಂಡವಮೂರ್ತಿ, ನಂಜುಂಡ, ಚಾ.ಸಿ.ಸಿದ್ದರಾಜು, ಸಾಗರ್, ಎಂಡಿಆರ್ ಸ್ವಾಮಿ, ವೈ.ಎನ್.ನಂಜುಂಡಸ್ವಾಮಿ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.