ಚಾಮರಾಜನಗರ: ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಹೋರಾಟ ಮಾಡಿದ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ಉದ್ಯಾನದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
.VIDEO: News Express- ನಾಮಫಲಕಗಳಲ್ಲಿ ಶೇ 60 ಕನ್ನಡ; ಫೆ. 28 ಗಡುವು.
ಸೇನಾಪಡೆ ಅಧ್ಯಕ್ಷ ಶ್ರೀನಿವಾಸಗೌಡ ಮಾತನಾಡಿ, ‘ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಕನ್ನಡ ಚಳವಳಿಗಾರರನ್ನು ರಾಜ್ಯ ಸರ್ಕಾರ ಬಂಧಿಸಿ ಮೊಕದ್ದಮೆ ಹೂಡಿರುವುದು ಖಂಡನೀಯ. ಸರ್ಕಾರ ಮಾಡಬೇಕಾದ ಕೆಲಸವನ್ನು ಕನ್ನಡ ಚಳವಳಿಗಾರರು ಬೀದಿಗಿಳಿದು ಹೋರಾಟ ನಡೆಸಿ ಮಾಡುತ್ತಿದ್ದಾರೆ. ಇದನ್ನು ಸಹಿಸದೆ ಹೋರಾಟಗಾರರನ್ನು ಬಂಧಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಕಾವೇರಿ, ಕೃಷ್ಣ ನದಿಗಳು, ಹೋರಾಟಗಾರರು, ರೈತರು ಬೇಕಾಗಿಲ್ಲ. ಇದೊಂದು ಕನ್ನಡ ವಿರೋಧಿ ಸರ್ಕಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
.ಬೆಳಗಾವಿ: ನಾರಾಯಣಗೌಡ ಬಂಧನ ಖಂಡಿಸಿ ಪ್ರತಿಭಟನೆ.
ಸರ್ಕಾರ ತಕ್ಷಣವೇ ಹೋರಾಟಗಾರರ ಮೇಲೆ ಹೂಡಿರುವ ಮೊಕದ್ದಮೆ ವಾಪಸ್ ಪಡೆಯಬೇಕು. ನಾಮಫಲಕಗಳಲ್ಲಿ ಕನ್ನಡದಲ್ಲೇ ಬರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್ , ಚಾ.ರಾ.ಕುಮಾರ್, ರವಿಚಂದ್ರಪ್ರಸಾದ್ ಕಹಳೆ, ಗು.ಪುರುಷೋತ್ತಮ್, ಲಿಂಗರಾಜು, ರಾಚಪ್ಪ, ಪ್ರಕಾಶ್, ವೀರಭದ್ರ, ಸಾಗರ್ ರಾವತ್, ಮಂಜು, ತಾಂಡವಮೂರ್ತಿ, ಇತರರು ಇದ್ದರು
.ಇಂಗ್ಲಿಷ್ ನಾಮಫಲಕ ಧ್ವಂಸ: ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ 53 ಮಂದಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.