ಚಾಮರಾಜನಗರ: ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ; ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಬಿಜೆಪಿ ಸರ್ಕಾರದ ಶವಯಾತ್ರೆ ನಡೆಸಿದರು.

ಎಸ್ಡಿಪಿಐ ಕಾರ್ಯಕರ್ತರುಗುಂಡ್ಲುಪೇಟೆ ವೃತ್ತದಿಂದ ಭುವನೇಶ್ವರಿ ವೃತ್ತದವರೆಗೆ ಬಿಜೆಪಿ ಸರ್ಕಾರದ ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಎಸ್ಡಿಪಿಐ ಜಿಲ್ಲಾ ಅಧ್ಯಕ್ಷಅಬ್ರಾರ್ ಅಹಮದ್ ಮಾತನಾಡಿ ‘ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ ಪ್ರಯುಕ್ತ ಜಿಲ್ಲೆಯಲ್ಲಿ, ಟ್ವಿಟರ್ ಅಭಿಯಾನ, ಸಾಮೂಹಿಕ ಇ ಮೇಲ್ ಅಭಿಯಾನ, ಆನ್ಲೈನ್ ಅರ್ಜಿ, ಅಂಚೆ ಕಾರ್ಡ್ ಚಳವಳಿ, ರಾಜ್ಯ ಘಟಕದ ಅಧ್ಯಕ್ಷರ ಬಹಿರಂಗ ಪತ್ರ, ಸಾರ್ವಜನಿಕರಿಂದ ಸಹಿ ಸಂಗ್ರಹ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಸರ್ಕಾರದ ಅಣಕು ಶವಯಾತ್ರೆ ಮಾಡಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ರಾಷ್ಟ್ರಪತಿಗೆ ಆಗ್ರಹಿಸಲಾಗುತ್ತಿದೆ’ ಎಂದರು.

ಅಣಕು ಶವಯಾತ್ರೆಗೆ ಪೊಲೀಸರು ಅಡ್ಡಿ ಪಡಿಸಿದ ಪ್ರಸಂಗವೂ ನಡೆಯಿತು.

ಇದನ್ನು ಖಂಡಿಸಿದ ಅಬ್ರಾರ್ ‘ಪೊಲೀಸ್ ಇಲಾಖೆ ಕಾನೂನು ಚೌಕಟ್ಟಿನ ಒಳಗೆ ಕೆಲಸ ನಿರ್ವಹಿಸಬೇಕು. ಅದನ್ನು ಬಿಟ್ಟು ಬಿಜೆಪಿ ಪಕ್ಷದ ನಾಯಕರ ಮನಸ್ಸಿಗೆ ಸಂತೋಷ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಬಾರದು’ ಎಂದರು.

ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್, ಮುಖಂಡರಾದ ಸಂಘಸೇನಾ, ಜಿ.ಎಂ.ಗಾಡ್ಕರ್, ಪಿಎಫ್ಐ ಜಿಲ್ಲಾ ಅಧ್ಯಕ್ಷ ಕಫೀಲ್, ಕಾರ್ಯದರ್ಶಿ ಶೋಯೇಬ್ ಖಾನ್, ನಗರಸಭೆ ಸದಸ್ಯರಾದ ಮೊಹಮ್ಮದ್ ಅಮೀಕ್, ಅಫ್ಸರ್ ಪಾಷ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.