ಚಾಮರಾಜನಗರ: ತಾಲ್ಲೂಕಿನ ಮರಿಯಾಲದ ಮುರುಘರಾಜೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಚಾಮರಾಜನಗರ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲಾ ತಂಡಗಳು ಚಾಂಪಿಯನ್ ಆಗಿ ಹೊರಹೊಮ್ಮಿವೆ.

ಎರಡು ದಿನಗಳ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ತಲಾ 32 ತಂಡಗಳು ಭಾಗವಹಿಸಿದ್ದವು.

ಬಾಲಕರ ವಿಭಾಗದಲ್ಲಿ ಚಾಮರಾಜನಗರ ಹಾಗೂ ಉಡುಪಿ ಜಿಲ್ಲೆಗಳ ತಂಡ ಫೈನಲ್ ಪ್ರವೇಶಿಸಿದ್ದವು. ಅಂತಿಮ ಹಣಾಹಣಿಯಲ್ಲಿ ಚಾಮರಾಜನಗರ ತಂಡವು ಉಡುಪಿ ತಂಡವನ್ನು ಮಣಿಸಿತು.

ಬಾಲಕಿಯರ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದ ಉಡುಪಿ ಹಾಗೂ ಮಂಡ್ಯ ಜಿಲ್ಲೆಗಳ ವಿದ್ಯಾರ್ಥಿನಿಯರ ನಡುವೆ ಟ್ರೋಪಿಗಾಗಿ ಹಣಾಹಣಿ ನಡೆಯಿತು. ಅಂತಿಮವಾಗಿ ಉಡುಪಿ ತಂಡಕ್ಕೆ ಗೆಲುವು ಒಲಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.