ಚಾಮರಾಜನಗರ: ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯೊಬ್ಬರು ಮಂಗಳವಾರ ಕಾಲೇಜಿನ ಹಾಸ್ಟೆಲ್ನಲ್ಲಿನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪದವಿ ಕಾಲೇಜಿನಲ್ಲಿ ಜೀವ ವಿಜ್ಞಾನ ವಿಷಯ ಬೋಧನೆ ಮಾಡುತ್ತಿದ್ದ ಚಂದನಾ (26) ಆತ್ಮಹತ್ಯೆ ಮಾಡಿಕೊಂಡವರು. ಯಳಂದೂರು ತಾಲ್ಲೂಕಿನ ಅಂಬಳೆಯವರಾಗಿದ್ದ ಚಂದನಾ ಅವರ ಹುಟ್ಟುಹಬ್ಬ ಮಂಗಳವಾರವೇ ಇತ್ತು.

ಜೆಎಸ್ಎಸ್ ಕಾಲೇಜಿನಲ್ಲೇ ಓದಿದ್ದ ಅವರು, ಅಲ್ಲಿಯೇ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ಹಾಸ್ಟೆಲ್ನಲ್ಲೇ ಉಳಿದುಕೊಂಡಿದ್ದರು.

ಮಂಗಳವಾರ ಬೆಳಿಗ್ಗೆ 10.30–11 ಗಂಟೆಯ ಅವಧಿಯಲ್ಲಿ ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 11.30ರ ಹೊತ್ತಿಗೆ ಪ್ರಕರಣ ಬೆಳಕಿಗೆ ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

‘ಸಾಯುವುದಕ್ಕೂ ಮೊದಲೂ ಪತ್ರ ಬರೆದಿದ್ದಾರೆ. ಅದರಲ್ಲಿ, ‘ನನ್ನ ಸಾವಿಗೆ ನಾನೇ ಕಾರಣ. ಒತ್ತಡದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಬರೆದಿದ್ದಾರೆ’ ಎಂದು ಪಟ್ಟಣ ಠಾಣೆ ಇನ್ಸ್ಪೆಕ್ಟರ್ ತಿಮ್ಮರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ಚಂದನಾ ತಂದೆ ನೀಡಿರುವ ದೂರಿನ ಆಧಾರದಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.