ಗುಂಡ್ಲುಪೇಟೆ: ಕಳೆದ 3 ತಿಂಗಳಿಂದ ರೈತರಿಗೆ ಉಪಟಳ ಕೊಡುತ್ತಿದ್ದ ಗಂಡು ಚಿರತೆ ಕೊನೆಗೂ ಬೋನಿನಲ್ಲಿ ಸೆರೆಯಾಗಿರುವ ಘಟನೆ ಕುಲಗಾಣ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬುವವರ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು. ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ. ಮಾಹಿತಿ ಅರಿತ ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಯನ್ನು ಬೇರೆಡೆಗೆ ರವಾನಿಸಿದ್ದಾರೆ. ಸೆರೆಯಾದ ಚಿರತೆ ಗಂಡಾಗಿದ್ದು, ಸುಮಾರು 5 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.

ನಿಟ್ಟುಸಿರು ಬಿಟ್ಟ ರೈತರು: ಸೀಗೆವಾಡಿ-ಕುಲಗಾಣ ಗ್ರಾಮದ ಸುತ್ತಮುತ್ತಲು ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿತ್ತು. ಇದರಿಂದ ರೈತರು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುವಂತಾಗಿತ್ತು. ಇದರಿಂದ ಬೇಸತ್ತಿದ್ದ ರೈತರ ಮನವಿ ಮೇರೆಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಇದರಿಂದ ಈ ಭಾಗದ ರೈತರು ನಿಟ್ಟುಸಿರು ಬಿಡುವಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.