ಹನೂರು (ಚಾಮರಾಜನಗರ ಜಿಲ್ಲೆ): ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯದ ಗುಂಡಾಳ್ ಶಾಖೆಯ ಲೊಕ್ಕನಹಳ್ಳಿ ಪಶ್ಚಿಮ ಗಸ್ತಿನ ಬರಳ್ಳ ಅರಣ್ಯ ಪ್ರದೇಶದಲ್ಲಿ 5 ರಿಂದ 6 ವರ್ಷ ಪ್ರಾಯದ ಹೆಣ್ಣು ಹುಲಿಯ ಕಳೆಬರ ಪತ್ತೆಯಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುವ ಸಂದರ್ಭ ಹುಲಿಯ ಮೃತದೇಹ ಪತ್ತೆಯಾಗಿದ್ದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎಸ್ಒಪಿಯ ಅನುಸಾರ ಮರಣೋತ್ತರ ಪರೀಕ್ಷೆ ನಡೆಸಿ ಹುಲಿಯ ಸಂಪೂರ್ಣ ಕಳೆಬರವನ್ನು ವಿಲೇ ಮಾಡಲಾಗಿದೆ.

ಚರ್ಮ ಸಹಿತ ಎಲ್ಲ ಅವಯವಗಳು ಇದ್ದು ಹುಲಿಯ ಸಾವು ಸ್ವಾಭಾವಿಕ ಎಂದು ವನ್ಯಜೀವಿ ತಜ್ಞ ವೈದ್ಯರು ದೃಢಪಡಿಸಿದ್ದಾರೆ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ.ಕಂಟ್ರ್ಯಾಕ್ಟರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಚಿರತೆ ಸಾವು:

ಗುಂಡ್ಲುಪೇಟೆ ತಾಲ್ಲೂಕಿನ ನೇನೆಕಟ್ಟೆ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಚಿರತೆ ಮೃತದೇಹ ಪತ್ತೆಯಾಗಿದೆ. ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.