ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ (ಬಿಎಸ್ಪಿ) ಸ್ಪರ್ಧಿಸಿದ್ದ ಸಿ.ಎಸ್. ರಮೇಶ್ ಅವರ ನಿಧನ ಹೊಂದಿದ್ದರಿಂದರದ್ದಾಗಿದ್ದ ಕೊಳ್ಳೇಗಾಲ ನಗರಸಭೆಯ 9ನೇ ವಾರ್ಡಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಅಕ್ಟೋಬರ್ 9ರಂದು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಹೊರಡಿಸುವರು. ನಾಮಪತ್ರ ಸಲ್ಲಿಸಲು ಅಕ್ಟೋಬರ್12 ಕಡೆಯ ದಿನ. ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.

ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅಕ್ಟೋಬರ್20ಕಡೆ ದಿನ. ಮತದಾನ ಅವಶ್ಯವಿದ್ದರೆ 28ರಂದು ಬೆಳಿಗ್ಗೆ7ರಿಂದ ಸಂಜೆ5 ರವರೆಗೆ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಅಕ್ಟೋಬರ್ 30ರಂದು ನಡೆಸಲಾಗುತ್ತದೆ.

ಮತಗಳ ಎಣಿಕೆ ಕಾರ್ಯವು ಅಕ್ಟೋಬರ್ 31ರಂದು ಬೆಳಿಗ್ಗೆ8 ಗಂಟೆಗೆ ಆಯಾ ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.