ಗುಂಡ್ಲುಪೇಟೆ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚೌಡಹಳ್ಳಿ ಗ್ರಾಮದ ಸಮೀಪ ಭಾನುವಾರ ನಡೆದಿದೆ.

ಚೌಡಹಳ್ಳಿ ಗ್ರಾಮದ ಶಿವಯ್ಯ (56) ಹಾಗೂ ಹುಂಡಿಪುರ ಗ್ರಾಮದ ಅಜಿತ್ (22) ಮೃತಪಟ್ಟವರು. ಚೌಡಹಳ್ಳಿ ಗ್ರಾಮದ ಚಂದು ಎಂಬುವರಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌಡಹಳ್ಳಿ ಗ್ರಾಮದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು. ಎರಡೂ ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.