ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ನಗರದಲ್ಲಿ ವಿವಿಧ ಸಂಘಟನೆಗಳು ಹಾಗೂ ಗಣ್ಯರ ವತಿಯಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ನಗರದ ಈಶ್ವರಿ ಟ್ರಸ್ಟ್, ಪತಂಜಲಿ ಯೋಗ ಶಿಕ್ಷಣ ಸಮಿತಿಗಳು ಜಂಟಿಯಾಗಿ ಕುಲುಮೆ ರಸ್ತೆಗೆ ಸಾಲು ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದವು.

ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು ಅವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹೆಸರನ್ನು ಜಗತ್ತಿನ ಮಟ್ಟದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಇಡೀ ವಿಶ್ವವೇ ಭಾರತದ ಕಡೆ ನೋಡುವಂತಹ ಕೆಲಸ ಮಾಡಿದ್ದಾರೆ’ ಎಂದರು.

‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಮೋದಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಈಶ್ವರಿ ಟ್ರಸ್ಟ್ ವತಿಯಿಂದ ಗಿಡ ನಡೆವುದರ ಮೂಲಕ ಹುಟ್ಟು ಹಬ್ಬ ಆಚರಿಸುತ್ತಿರುವುದು ಶ್ಲಾಘನೀಯ. ಗಿಡ ನೆಡುವುದು ದೊಡ್ಡ ವಿಚಾರ ಅಲ್ಲ. ಅದನ್ನು ಸಾಕಿ ಸಲಹುದು ದೊಡ್ಡ ವಿಚಾರ ಎಂದರು.

ಈಶ್ವರಿ ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್ ಮಾತನಾಡಿ, ‘ಮೋದಿ ಹುಟ್ಟು ಹಬ್ಬದ ಪ್ರಯುಕ್ತ 100 ಸಾಲು ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ. ಒಂದು ತಿಂಗಳಿಂದ ಸೋಮಣ್ಣ, ಬಿ.ರಾಚಯ್ಯ ಸೇರಿದಂತೆ ಅನೇಕ ಮಹನೀಯರ ಹೆಸರಿನಲ್ಲಿ ‘ನಮ್ಮ ಜಿಲ್ಲೆ, ನಮ್ಮ ನಾಯಕರು’ ಎಂಬ ಹೆಸರಿನಡಿ ಗಿಡ ನಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದರು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಎಚ್.ಜಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಂಜುಂಡಸ್ವಾಮಿ, ಪತಾಂಜಲಿ ಯೋಗ ಶಿಕ್ಷಣ ಸಮಿತಿ ಮುಖ್ಯ ಶಿಕ್ಷಕ ಕೆ.ಜಿ.ಪ್ರಕಾಶ್, ನಿಜಗುಣ, ಮಹಿಳಾ ಯೋಗ ಶಿಕ್ಷಕಿ ರೇಣುಕಾ, ಜಯಲಕ್ಷ್ಮೀ ವೆಂಕಟೇಶ್ ಇದ್ದರು.

ನೀರಿನ ಬಾಟಲಿ, ಸಿಹಿ ವಿತರಣೆ:ಮೋದಿ ಹುಟ್ಟುಹಬ್ಬದ ಅಂಗವಾಗಿ ನಗರದ ಸಂತೇಮರಹಳ್ಳಿ ವೃತ್ತದಲ್ಲಿ 19ನೇ ವಾರ್ಡ್ ಸದಸ್ಯ ಶಿವರಾಜ್ ನೇತೃತ್ವದಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿ, ಸಿಹಿ ವಿತರಿಸಲಾಯಿತು.

ನಗರಸಭಾ ಸದಸ್ಯರಾದ ರಾಘವೇಂದ್ರ, ಚಂದ್ರಶೇಖರ್, ಮುಖಂಡ ಮಹದೇವನಾಯಕ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ನಟರಾಜು, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ್, ಶ್ರೀಮಹದೇಶ್ವರ ಆಟೊ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ಮಹೇಶ, ಸೆಂದಿಲ್, ಶ್ರೀನಿವಾಸ, ಚೇತನ್, ಅಭಿನಾಯಕ, ಬಸವರಾಜು,ಚಂದು, ಮಹೇಶ್, ಮಂಜು, ಯೋಗಿ, ಸ್ವಾಮಿ, ಶೇಖರ್ ಇತರರು ಇದ್ದರು.

ಹೊಲಿಗೆ ಯಂತ್ರ ವಿತರಣೆ

ಮೋದಿ ಹುಟ್ಟುಹಬ್ಬದ ಪ್ರಯುಕ್ತ ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು ಅವರು ಮೂವರು ಬಡ ಮಹಿಳೆಯರಿಗೆ ಹೊಲಿಗೆಯಂತ್ರ ವಿತರಿಸಿದರು.

ನಗರದ ನಿಜಗುಣ ರೆಸಾರ್ಟ್ನ ಅವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ನಿಜಗುಣರಾಜು, ‘ ಹೆಮ್ಮೆಯ ಪ್ರಧಾನಿ ಮೋದಿಯವರ ಜನ್ಮದಿನವನ್ನು ಹಲವು ವರ್ಷಗಳಿಂದ ವಿವಿಧ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಅಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರಧಾನಿ ಮೋದಿ ಅವರು ಘೋಷಣೆಯಾದ ಮಹಿಳೆಯ ಸಬಲೀಕರಣದ ಭಾಗವಾಗಿ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತಿದೆ’ ಎಂದರು.

ಬಿಜೆಪಿ ಮುಖಂಡ ಕಿಲಗೆರೆ ಬಸವರಾಜು, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೂರ್ಯ ಬಾಲರಾಜ್, ಯುವ ಮೋರ್ಚಾ ಮಂಡಲದ ಅಧ್ಯಕ್ಷ ಆನಂದ್ ಭಗೀರಥ, ನಂದೀಶ್ ವಿಶ್ವಕರ್ಮ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.