ಚಾಮರಾಜನಗರ: ‘ಎಲ್ಲರಲ್ಲೂ ಕೈ ಮುಗಿದು ಬೇಡುತ್ತೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಯಾಯೂ ಮತದಾನದಿಂದ ಹಿಂದೆ ಸರಿಯಬಾರದು. ಇದು ನಮ್ಮ ಹಕ್ಕು’ ಎಂದು ಜಿಲ್ಲಾ ಚುನಾವಣಾ ರಾಯಭಾರಿ ಮತ್ತು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುಸರಸ್ಕೃತೆ ಸೋಲಿಗರ ಮಾದಮ್ಮ ಶನಿವಾರ ಮನವಿ ಮಾಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ‘ನಮ್ಮ ನಡೆ ಮತಗಟ್ಟೆಯ ಕಡೆ' ಎಂಬ ಧ್ಯೇಯ ವಾಕ್ಯದಡಿ ಮತದಾರರಲ್ಲಿ ಮತಗಟ್ಟೆ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇದೇ 10ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತ ಚಲಾಯಿಸೋಣ’ ಎಂದರು.

ಮೊದಲ ಬಾರಿಗೆ ಮತ ಚಲಾಯಿಸಲಿರುವ ಮೈತ್ರಿ ಮಾತನಾಡಿ, ‘ಯಾವುದೇ ಆಮಿಷಕ್ಕೆ ಒಳಗಾಗದೆ ನ್ಯಾಯಯುತ ಹಾಗೂ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯ. ಇಂದಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳು ಮತದಾನದ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಆದರೆ ಇಂತಹ ತಪ್ಪನ್ನು ಯಾರೂ ಮಾಡಬಾರದು. ತಪ್ಪದೇ ಮತ ಚಲಾಯಿಸಬೇಕು’ ಎಂದರು.

ಮತ್ತೊಬ್ಬ ಯುವ ಮತದಾರ ಶ್ರೀನಿಧಿ ಮಾತನಾಡಿ, ‘ಪ್ರಥಮವಾಗಿ ಮತ ಚಲಾಯಿಸುತ್ತಿರುವ ನಾವು ಯೋಚಿಸಿ ಯೋಗ್ಯ ವ್ಯಕ್ತಿಗೆ ಮತಚಲಾಯಿಸಬೇಕು. ಕ್ಷೇತ್ರದ ಅಬಿವೃದ್ಧಿಗೆ ಬದ್ಧವಾಗಿರುವ ವ್ಯಕ್ತಿಗೆ ಮತಹಾಕಬೇಕು’ ಎಂದರು.

ಮತದಾನ ಜಾಗೃತಿಗಾಗಿ ಗೊರುಕನ, ವೀರಗಾಸೆ ನೃತ್ಯ ಮತ್ತು ಪೌರಾಣಿಕ ನಾಟಕ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು.

ಇದಕ್ಕೂ ಮೊದಲು, ಜಿಲ್ಲಾಡಳಿತ ಭವನದ ಮುಂಭಾಗ ಮತದಾನ ಜಾಗೃತಿ ಕುರಿತ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ನೆರವೇರಿಸಿದರು.

ಪೊಲೀಸ್ ವೀಕ್ಷಕರಾದ ಠಾಕೂರ್ ಥಾಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮತದಾನ ಜಾಗೃತಿ ರಾಯಭಾರಿ ಸೋಲಿಗರ ಮಾದಮ್ಮ ಇದ್ದರು.

ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ ನಡೆಯಿತು. ತಾಲ್ಲೂಕಿನ ವ್ಯಾಪ್ತಿಯ ಗ್ರಾಮಪಂಚಾಯಿತಿಗಳಿಂದ ಆಗಮಿಸಿದ್ದ ಸರ್ಕಾರಿ ನೌಕರರು ನಗರದ ಡಾ.ಬಿ. ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಎಲ್.ಐ.ಸಿ. ಕಚೇರಿ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ರ‍್ಯಾಲಿ ನಡೆಸಿದರು.

ಜಾಥಾ ಮೂಲಕ ಜಾಗೃತಿ

ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಡಳಿತ ಭವನದಲ್ಲಿ ಇರುವ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಭುವನೇಶ್ವರಿ ವೃತ್ತ, ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ವೀರಭದ್ರೇಶ್ವರಸ್ವಾಮಿ ದೇವಸ್ಥಾನ ಮಾರ್ಗವಾಗಿ ಮಾರಿಗುಡಿ ದೇವಸ್ಥಾನದವರೆಗೆ ಜಾಥಾ ನಡೆಸಿದರು.

ನಗರದ ಪಿಡಬ್ಲ್ಯುಡಿ ಕಾಲೊನಿಯಲ್ಲಿರುವ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ (ಪೂರ್ವ), ವೀರಭದ್ರೇಶ್ವರ ದೇವಾಲಯದ ಬಳಿಯಿರುವ ಸರ್ಕಾರಿ ಪ್ರಾಥಮಿಕ ಶಾಲೆ, ಬಿಇಒ ಕಚೇರಿ ಹಿಂಭಾಗದಲ್ಲಿರುವ ಸರ್ಕಾರಿ ಬಾಲಕರ ಉನ್ನತ ಪ್ರಾಥಮಿಕ ಶಾಲೆ, ಗಾಳಿಪುರದ ಬೀಡಿ ಕಾಲೊನಿಯಲ್ಲಿರುವ ಉರ್ದು ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ, ಪಿಡಬ್ಲೂಡಿ ಕಾಲೋನಿ ಯಲ್ಲಿರುವ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ, ಪೇಟೆ ಹೈಯರ್ ಪ್ರೈಮರಿ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.