ಗುಂಡ್ಲುಪೇಟೆ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾರಣ ಕರ್ನಾಟಕ ಹಾಗು ಕೇರಳ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಜಂಟಿಯಾಗಿ ಗಡಿಭಾಗ ಮುತ್ತಂಗ ಚೆಕ್ಪೋಸ್ಟ್ ನಲ್ಲಿ ವಾಹನ ತಪಾಸಣೆ ಆರಂಭಿಸಿದೆ.

ಕರ್ನಾಟಕದ ಬಂಡೀಪುರ ಅಭಯಾರಣ್ಯದ ಮಾರ್ಗವಾಗಿ ಮದ್ದೂರು ಮತ್ತು ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ಸಂಚರಿಸುವ ಪ್ರತಿಯೊಂದು ವಾಹನಗಳ ಮೇಲೆ ಎರಡು ರಾಜ್ಯಗಳ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಅಧಿಕಾರಿಗಳು ಹಾಗು ಸಿಬ್ಬಂದಿ ಎರಡು ಕಡೆ ದೂರವಾಣಿ ಸಂಖ್ಯೆಯನ್ನು ವಿನಿಮಯ ಮಾಡಿಕೊಂಡು ಗಡಿಯಲ್ಲಿ ಅಕ್ರಮ ಚಟುವಟಿಕೆ ಕಂಡು ಬಂದರೆ ಕೂಡಲೇ ಮಾಹಿತಿ ರವಾನಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಈ ಕುರಿತು ಗುಂಡ್ಲುಪೇಟೆ ವಲಯದ ಅಬಕಾರಿ ನಿರೀಕ್ಷಕ ತನ್ವೀರ್ ಪ್ರತಿಕ್ರಿಯೆ ನೀಡಿ, ಉಪ ಚುನಾವಣೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಪ್ರತಿಯೊಂದ ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ. ಈ ಮೂಲಕ ಯಾವುದೇ ಅಕ್ರಮ ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಅಬಕಾರಿ ಸಿಬ್ಬಂದಿ ಭಾಸ್ಕರ್, ಸಿದ್ದರಾಜು, ಸಿದ್ದೇಶ್ ಸೇರಿದಂತೆ ಕರ್ನಾಟಕ ಮತ್ತು ಕೇರಳ ರಾಜ್ಯದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.