ಚಿಂತಾಮಣಿ: ಚಿಂತಾಮಣಿ-ಮದನಪಲ್ಲಿ ರಾಜ್ಯ ಹೆದ್ದಾರಿಯ ದಂಡುಪಾಳ್ಯ ಗೇಟ್ ಸಮೀಪ ಶನಿವಾರ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸುಟ್ಟುಕರಕಲಾಗಿದೆ.

ಚಿಂತಾಮಣಿಯ ಗಾಂಧಿನಗರದ ದೇವರಾಜ್ (30) ಮೃತಪಟ್ಟ ಬೈಕ್ ಸವಾರ. ಬೆಂಗಳೂರಿನಿಂದ ಕಡಪಾ ಕಡೆಗೆ ಹೋಗುತ್ತಿದ್ದ ಕಾರು ದಂಡುಪಾಳ್ಯದ ಗೇಟ್ ಸಮೀಪದಲ್ಲಿ ಎದುರುಗಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸವಾರ ದೇವರಾಜ್ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಬೈಕ್ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನ ಚಾಲಕ ಹಾಗೂ ಕಾರಿನಲ್ಲಿದ್ದವರಿಗೆ ಗಾಯಗಳಾಗಿಲ್ಲ. ಡಿವೈಎಸ್ಪಿ ಮುರಳೀಧರ್ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಸ್ಥಕ್ಕೆ ತೆರಳಿ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸರ್ಕಾರಿ ಅಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.