ಹೊಸಕೋಟೆ: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎನ್.ಬಚ್ಚೇಗೌಡ ಕಣಕ್ಕೆ ಇಳಿಯಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬರ ಅಧ್ಯಯನಕ್ಕಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಕೆಲವೊಂದು ಕಾರಣಗಳಿಂದ ಬಚ್ಚೇಗೌಡರು ಗೆಲ್ಲಲಾಗಲಿಲ್ಲ. ಈ ಬಾರಿ ಹೆಚ್ಚಿನ ಬಹುಮತದಿಂದ ಗೆಲ್ಲಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಬಗ್ಗೆ ಪತ್ರಿಕೆಗಳಲ್ಲಿ ಬಂದ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿದ ಅವರು, ‘ನಾನು ಸಮೀಕ್ಷೆಗಳನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಕನಿಷ್ಠ 20 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು ಅದರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವೂ ಒಂದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.