ಶಿಡ್ಲಘಟ್ಟ: ತ್ಯಾಗ ಮತ್ತು ಬಲಿದಾನದ ಸಂಕೇತ ಈದ್ ಉಲ್ ಅದಾ ಹಬ್ಬವನ್ನು ಸೋಮವಾರ ನೂರಾರು ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ನಗರದ ಐತಿಹಾಸಿಕ ಜಾಮೀಯಾ ಮಸೀದಿ ಬಳಿ ಜಮಾಯಿಸಿದ ಮುಸ್ಲಿಮರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

ಜಾಮೀಯಾ ಮಸೀದಿ ಧರ್ಮಗುರು ಹಝರತ್ ಮೌಲಾನಾ ಗುಲಾಂ ಜೀಲಾನಿ, ಬಕ್ರೀದ್ ಹಬ್ಬದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಪ್ರಾರ್ಥನೆ ಸಲ್ಲಿಸಿದ ಹಝರತ್ ಇಸ್ಮಾಯಿಲ್ ಝಬೀಉಲ್ಲಾ ಸ್ಮರಣಾರ್ಥ ಮೇಕೆ, ಕುರಿ ಬಲಿ ನೀಡಿ ಮೂರು ಭಾಗಗಳಾಗಿ ವಿಂಗಡಿಸಿ ಮಾಂಸ ಹಂಚಿದರು.

ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.