ಚಿಕ್ಕಬಳ್ಳಾಪುರ: ಐದು ರಾಜ್ಯಗಳ ಚುನಾವಣೆಯತ್ತ ಕೇಂದ್ರ ಸರ್ಕಾರ ಗಮನ ನೀಡಿದೆ. ಯಾವ ರಾಜ್ಯದಲ್ಲಿ ಯಾವ ಪರಿಸ್ಥಿತಿ ಇದೆ ಎನ್ನುವ ಬಗ್ಗೆ ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ಕಳುಹಿಸಿತ್ತು. ಬರದಿಂದ ರಾಜ್ಯದಲ್ಲಿ ₹33 ಸಾವಿರ ಕೋಟಿಯಷ್ಟು ಬೆಳೆ ಹಾನಿಯಾಗಿದೆ. ₹17 ಸಾವಿರ ಕೋಟಿ ಬರ ಪರಿಹಾರಕ್ಕೆ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಕೋರಿದೆ. ಅಲ್ಲದೆ, ಪ್ರತಿವರ್ಷ ನೀಡಬೇಕಾದ ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನೂ ಕೇಂದ್ರ ಹಣಕಾಸು ಸಚಿವರು ಬಿಡುಗಡೆ ಮಾಡಿಲ್ಲ ಎಂದರು.

ಆಪರೇಷನ್ ಕಮಲದ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ. ಪಕ್ಷದ ವಿಷಯದಲ್ಲಿ ದಿನವೂ ಯಾರಾದರೂ ಒಬ್ಬರು ಮಾತನಾಡಬೇಕಾಗಿರುತ್ತದೆ. ಆದ ಕಾರಣ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಸಿ.ಟಿ.ರವಿ ಹೀಗೆ ದಿನ ಒಬ್ಬೊಬ್ಬರು ಮಾತನಾಡುವರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.