ಚಿಕ್ಕಬಳ್ಳಾಪುರ: ಅಧಿಕಾರಿಗಳ ಕಣ್ಗಾವಲು ಮತ್ತು ಜಾಗೃತಿಯ ನಡುವೆಯೂ ಜಿಲ್ಲೆಯಲ್ಲಿ ಬಾಲ್ಯ ವಿವಾಹಕ್ಕೆ ಪ್ರಯತ್ನಗಳು ಮಾತ್ರಮುಂದುವರಿದಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ತಡೆದ ಅಂಕಿ ಅಂಶಗಳೇ ಇದನ್ನು ಸಾರಿ ಹೇಳುತ್ತಿವೆ.

ಅದರಲ್ಲಿಯೂ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಬಾಲ್ಯ ವಿವಾಹದ ಪ್ರಯತ್ನಗಳು ಘಟಿಸುತ್ತಿವೆ. ನಂತರದ ಸ್ಥಾನದಲ್ಲಿ ಚಿಂತಾಮಣಿಮತ್ತು ಶಿಡ್ಲಘಟ್ಟ ತಾಲ್ಲೂಕು
ಇದೆ.

2022ರ ಮಾರ್ಚ್‌ನಿಂದ ಸೆಪ್ಟೆಂಬರ್ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ 56 ದೂರುಗಳು ಬಂದಿದೆ. ಇದರಲ್ಲಿ 53 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಮೂರು ಕಡೆಗಳಲ್ಲಿ ಬಾಲ್ಯ ವಿವಾಹಗಳು ಜರುಗಿದ್ದು ಪ್ರಕರಣ ಸಹ ದಾಖಲಿಸಲಾಗಿದೆ.

ಈ ಆರು ತಿಂಗಳಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ 15, ಚಿಕ್ಕಬಳ್ಳಾಪುರ ಮೂರು, ಚಿಂತಾಮಣಿ 13, ಗೌರಿಬಿದನೂರು 8, ಗುಡಿಬಂಡೆ 3 ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ 13 ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ದೂರುಗಳು ಸಹಾಯವಾಣಿಗೆ ದಾಖಲಾಗಿವೆ. ಇವುಗಳಲ್ಲಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಗೌರಿಬಿದನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣಗಳಲ್ಲಿ ಬಾಲ್ಯ ವಿವಾಹಗಳು ಜರುಗಿವೆ. ಈ ಸಂಬಂಧ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪ್ರಕರಣ ಸಹ ದಾಖಲಿಸಿದ್ದಾರೆ.

‘ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ದೊರೆತರೆ ಅಥವಾ ಅಂತಹ ಪ್ರಕರಣಗಳು ಘಟಿಸುತ್ತಿರುವುದು ತಿಳಿದರೆ ಸಹಾಯವಾಣಿ 1098ಕ್ಕೆ ಸಂಪರ್ಕಿಸಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುತ್ತದೆ. ಈಗಾಗಲೇ ಜಿಲ್ಲೆಯಾದ್ಯಂತ ಬಾಲ್ಯ ವಿಹಾದ ತಡೆಗೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ’ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹಮ್ಮದ್ ಉಸ್ಮಾನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.