ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಂದಿರುವ ಉಪ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಸ್ಪರ್ಧಾ ಕಣದಲ್ಲಿರುವ ಒಂಬತ್ತು ಅಭ್ಯರ್ಥಿಗಳ ‘ಭವಿಷ್ಯ’ ಗುರುವಾರ ನಡೆಯುವ ಮತದಾನದಲ್ಲಿ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ನಗರದ ಬಿ.ಬಿ.ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ತೆರೆದ ಮಸ್ಟರಿಂಗ್ ಕೇಂದ್ರಕ್ಕೆ (ಮತದಾನದ ಹಿಂದಿನ ದಿನ ಮತಯಂತ್ರಗಳನ್ನು ಇಡುವ ಕೇಂದ್ರ) ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ ಬೆಳಿಗ್ಗೆ ಬಂದು ತಮ್ಮ ನಿಯೋಜಿತ ಸ್ಥಳದ ಮಾಹಿತಿಯನ್ನು ಪಡೆದುಕೊಂಡರು.

ಬಳಿಕ ಮತಯಂತ್ರ, ಮತ ಖಾತರಿ ಯಂತ್ರ, ನಿಯಂತ್ರಣ ಘಟಕ, ಅಳಿಸಲಾಗದ ಶಾಹಿ, ವಿವಿಧ ಲಕೋಟೆ, ಘೋಷಣಾ ಪತ್ರಗಳು, ಕೈಪಿಡಿ, ರಬ್ಬರ್ ಮೊಹರು, ಸ್ಟೇಷನರಿ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪಡೆದು ಪರಿಶೀಲನೆ ನಡೆಸಿದರು.

ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ಸಂಪನ್ಮೂಲ ವ್ಯಕ್ತಿಗಳು ಮತಗಟ್ಟೆಯಲ್ಲಿ ಪಾಲಿಸಬೇಕಾದ ನಿರ್ದೇಶನಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಊಟ ಮುಗಿಸಿದ ಸಿಬ್ಬಂದಿ ಅರೆಸೇನಾ ಪಡೆ ಯೋಧರು, ಪೊಲೀಸ್ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಜತೆ ವಾಹನಗಳಲ್ಲಿ ಸಂಬಂಧಪಟ್ಟ ಮತಗಟ್ಟೆಗಳತ್ತ ಪ್ರಯಾಣ ಬೆಳೆಸಿದರು.

ಮಸ್ಟರಿಂಗ್ ಕೇಂದ್ರದಲ್ಲಿ ಸಿಬ್ಬಂದಿಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ಚುನಾವಣೆ ಸಿಬ್ಬಂದಿಗಳ ಪ್ರಯಾಣಕ್ಕಾಗಿ 41 ಕೆಎಸ್ಆರ್ಟಿಸಿ ಬಸ್ಗಳು, 5 ಮಿನಿ ಬಸ್, 25 ಖಾಸಗಿ ಕಾರುಗಳು ಸೇರಿದಂತೆ ಒಟ್ಟು 71ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ. ಪ್ರತಿ ಸೆಕ್ಟರ್ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಮತ ಯಂತ್ರಗಳನ್ನು ನೀಡಲಾಗಿದೆ.

ಕ್ಷೇತ್ರ ವ್ಯಾಪ್ತಿಯಲ್ಲಿ 99,449 ಪುರುಷ, 1,00,747 ಮಹಿಳೆ ಮತ್ತು 22 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,00,218 ಮತದಾರರಿದ್ದಾರೆ. ಮತದಾನಕ್ಕಾಗಿ 254 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,253 ಮತಗಟ್ಟೆ ಸಿಬ್ಬಂದಿ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.