ಚಿಕ್ಕಬಳ್ಳಾಪುರ: ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ವಿಚಾರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯು 47ನೇ ಬಾರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ಭಾಜನವಾಗಿದೆ. 2022ರ ಜನವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಸಕಾಲದಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಂಕ್ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ.

‘ಜಿಲ್ಲೆಯಲ್ಲಿ ಜನವರಿಯಲ್ಲಿ ಒಟ್ಟು 68,667 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ 67,722 ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ. 4,071 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿವೆ. 2,217 ಅರ್ಜಿಗಳು ವಿಲೇವಾರಿ ಆಗುವುದು ಬಾಕಿಯಿದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿ ಆಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ. ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ ಎಂದಿದ್ದಾರೆ.

ಸಕಾಲ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿದೆ. ಯೋಜನೆ ಆರಂಭವಾದಾಗಿನಿಂದ (2012ರಿಂದ) ಇಲ್ಲಿಯವರೆಗೆ ಜಿಲ್ಲೆ ರಾಜ್ಯದಲ್ಲಿಯೇ 47 ಬಾರಿ ಪ್ರಥಮ ಸ್ಥಾನಗಳಿಸಿದೆ.ಇದು ಜಿಲ್ಲಾಡಳಿತದ ಪಾರದರ್ಶಕ, ಯುಕ್ತ, ತ್ವರಿತ ಆಡಳಿತಕ್ಕೆ ಕೈಗನ್ನಡಿಯಾಗಿದೆ ಎಂದು ಹೇಳಿದ್ದಾರೆ.

ಸಕಾಲ ಯೋಜನೆ ಆರಂಭದಿಂದ ಇಲ್ಲಿಯವರೆಗೆ ಜಿಲ್ಲಾಡಳಿತವು ಒಟ್ಟು 20,98,381 ಅರ್ಜಿಗಳನ್ನು ಸ್ವೀಕರಿಸಿ 20,76,286 ಅರ್ಜಿಗಳನ್ನು ಶೇ 98.94 ಸರಾಸರಿಯಲ್ಲಿ ವಿಲೇವಾರಿ ಮಾಡಿದೆ. 47 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನ ಗಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಸೇವೆ ನೀಡಿದ್ದಾರೆ. ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.