ಚಿಕ್ಕಬಳ್ಳಾಪುರ: ಶಾಸಕ ಡಾ.ಕೆ.ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತವಾಗಿದೆ ಎಂದು ಅವರ ಬೆಂಬಲಿಗರು ಬೆಂಗಳೂರಿನತ್ತ ತೆರಳಲು ಸಿದ್ಥವಾಗಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಲು ನಗರಸಭೆ ಅಧ್ಯಕ್ಷ, ಸದಸ್ಯರು ಹಾಗೂ ಮುಖಂಡರು ಮುಂದಾಗಿದ್ದಾರೆ.

ಸುಧಾಕರ್ ಅವರಿಗೆ ಸಚಿವ ಸ್ಥಾನ ದೊರೆಯಲಿದೆ. 10.30ಕ್ಕೆ ನಗರದ ಶನೈಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ತೆರಳುತ್ತೇವೆ ಎಂದು ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಪ್ರತಿನಿಧಿಸುತ್ತಿರುವ ಡಾ.ಕೆ.ಸುಧಾಕರ್ ಅವರಿಗೆ 48 ವರ್ಷ. ಒಕ್ಕಲಿಗ ಸಮುದಾಯದ ಅವರು ಎಂಬಿಬಿಎಸ್ ಶಿಕ್ಷಣ ವ್ಯಾಸಂಗ ಮಾಡಿದ್ದಾರೆ. ಅವರು 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ; ಇವತ್ತೇ ನೂತನ ಸಚಿವರ ಪ್ರಮಾಣ | Prajavani

2013, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸುಧಾಕರ್ ಗೆಲುವು ಸಾಧಿಸಿದರು. ಎಚ್.ಡಿ. ಕುಮಾರ ಸ್ವಾಮಿ ನೇತೃತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು.

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದ 17 ಶಾಸಕರಲ್ಲಿ ಸುಧಾಕರ್ ಸಹ ಒಬ್ಬರು. ಬಿಜೆಪಿ ಸೇರ್ಪಡೆಯಾಗಿ 2019ರ ಡಿ.5ರಂದು ನಡೆದ ಉಪಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದರು. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.