ಬಾಗೇಪಲ್ಲಿ: ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸುವರ್ಣ ಕನ್ನಡ ರಥ’ ಮೆರವಣಿಗೆಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಹಶೀಲ್ದಾರ್ ಮನೀಷಾ ಪತ್ರಿ, ತಾಲ್ಲೂಕು ಪಂಚಾಯಿತಿ ಇಒ ರಮೇಶ್ ಕನ್ನಡ ತಾಯಿ ಭುವನೇಶ್ವರಿಗೆ ಮಾಲಾರ್ಪಣೆ, ಕನ್ನಡ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು.

ಪಟ್ಟಣದ ಚಿತ್ರಾವತಿ ಮೇಲುಸೇತುವೆ ಬಳಿ ಸರ್ಕಾರಿ ನೌಕರರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಕನ್ನಡ ರಥವನ್ನು ಸ್ವಾಗತಿಸಿದರು. ಮೆರವಣಿಗೆಯಲ್ಲಿ ಕಂಸಾಳೆ ನೃತ್ಯ, ತಮಟೆ ವಾದನ, ಶಾಲಾ ಮಕ್ಕಳಿಂದ ಬ್ಯಾಂಡ್ಸೆಟ್, ಕನ್ನಡ ಹಾಡು ಹಾಡಿಸಲಾಯಿತು. ಭೂತಾಯಿ ಬಳಗದ ಕಲಾವಿದ ಮಹೇಶ್ ನಾಡಿಗೀತೆ, ರೈತಗೀತೆ ಹಾಡಿದರು.

ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಕುಂಬಾರಪೇಟೆ, ಡಾ.ಎಚ್.ಎನ್.ವೃತ್ತದ ಮೂಲಕ ನ್ಯಾಷನಲ್ ಕಾಲೇಜಿನ ಮುಂಭಾಗದವರೆಗೆ ಕನ್ನಡ ರಥ ಮೆರವಣಿಗೆ ಮಾಡಲಾಯಿತು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲು ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನ ಆಗಬೇಕು. ಕನ್ನಡಿಗರಿಗೆ ಬದುಕು ಸಿಗಬೇಕು. ಗಡಿ ಪ್ರದೇಶದಲ್ಲಿ ಕನ್ನಡ ಭಾಷೆ ಮಾತನಾಡಬೇಕು. ಕನ್ನಡ ಭಾಷೆ ಬಗ್ಗೆ ಕೀಳರಿಮೆ ಬೇಡ. ಕನ್ನಡದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ.ಕೃಷ್ಣಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಸಿಡಿಪಿಒ ರಾಮಚಂದ್ರ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿದೇರ್ಶಕ ಡಾ.ಚಿನ್ನಕೈವಾರಮಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.