ಚಿಂತಾಮಣಿ: ತಾಲ್ಲೂಕಿನ ಏನಿಗದಲೆಯ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿ ಅನಿಲ್ ಕುಮಾರ್ ರಾಷ್ಟ್ರಮಟ್ಟದ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ತಾಲ್ಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಉತ್ತಮವಾಗಿ ಆಡಿ ಪ್ರಥಮ ಸ್ಥಾನ ಗಳಿಸಿದ್ದಾನೆ ಎಂದು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಫಕೃಸಾಬಿ ತಿಳಿಸಿದ್ದಾರೆ.

ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಇದೇ 16 ರಿಂದ 20ರವರೆಗೆ ಮಧ್ಯಪ್ರದೇಶದ ನಾರಸಿಂಗಪುರದಲ್ಲಿ ಆಯೋಜಿಸಿದ 17 ವರ್ಷದ ರಾಷ್ಟಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳಿದ್ದಾರೆ. ತುಳವನೂರು ಗ್ರಾಮದ ಅನಿಲ್ ಕುಮಾರ್ ಬಾಲ್ಯದಿಂದಲೂ ಕಬಡ್ಡಿ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡಿದ್ದ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುರೇಶಬಾಬು ತರಬೇತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.