ಗೌರಿಬಿದನೂರು: ನಗರದ ಎಸ್ಎಸ್ಇಎ ಪಿಯು ಕಾಲೇಜಿನಲ್ಲಿ ಶಾಲಾ ಸುರಕ್ಷತಾ ಸಮಿತಿ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಗುರುವಾರ ನಡೆಯಿತು.

ಪೊಲೀಸ್ ಅಧೀಕ್ಷಕ ಕುಶಾಲ್ ಚೌಕ್ಸೆ ಮಾತನಾಡಿ, ‘ಶಾಲೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಶಾಲಾ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಮೊಬೈಲ್ ಆ್ಯಪ್ಗಳು ಮಕ್ಕಳ ಖಾಸಗಿ ಮಾಹಿತಿ ಕದ್ದು, ಬ್ಲಾಕ್ಮೇಲ್ ಮಾಡಿ, ಸುಲಿಗೆ ಮಾಡುವುದು ಹೆಚ್ಚುತ್ತಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರು ವಿದ್ಯಾರ್ಥಿಗಳ ಮೊಬೈಲ್ಗಳನ್ನು ಆಗಾಗ ಗಮನಿಸುತ್ತಿರಬೇಕು. ಜೊತೆಗೆ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡುವುದು ಅಪರಾಧ. ಇಂತಹ ವಿದ್ಯಾರ್ಥಿಗಳು ಮತ್ತು ಪೋಷಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಕುರಿತು ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ವಿದ್ಯಾರ್ಥಿಗಳು ಯಾವುದೇ ತೊಂದರೆಗೆ ಸಿಲುಕಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ಅಧಿಕ್ಷಕ ರಾಜ ಇಮಾಮ್ ಖಾಸಿಂ, ಇಂದಿನ ಯುವ ಪೀಳಿಗೆ ವಿದ್ಯಾರ್ಥಿಗಳಿಗೆ ಮೊಬೈಲ್ನಲ್ಲಿ ಬರುವ ಹೊಸ ಆ್ಯಪ್ಗಳ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಆದರೆ, ಅದರ ದುಷ್ಪರಿಣಾಮಗಳ ಬಗ್ಗೆ ಅವರಿಗೆ ತಿಳಿದಿರುವುದಿಲ್ಲ. ಒಮ್ಮೆ ಈ ಜಾಲತಾಣಗಳಿಗೆ ಸಿಲುಕಿದರೆ ಆಚೆ ಬರುವುದು ಕಷ್ಟಸಾದ್ಯ. ಇಂಥವುಗಳನ್ನು ಬಳಸುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಇಂತಹ ಆ್ಯಪ್ಗಳ ಮೇಲೆ ಪೊಲೀಸ್ ಇಲಾಖೆಯೂ ಹದ್ದಿನ ಕಣ್ಣಿಟ್ಟಿರುತ್ತದೆ ಎಂದರು.

ತಾಲ್ಲೂಕಿನ 306 ಶಾಲೆಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರ ರೂಪಿಸಿದ ನಿಯಮಗಳ ಪ್ರಕಾರ ಶಾಲೆಗಳು ಮಕ್ಕಳ ಹಿತ ಕಾಪಾಡುವುದು ಜವಾಬ್ದಾರಿಯಾಗಿರುತ್ತದೆ ಎಂದು ವೃತ್ತ ನಿರೀಕ್ಷಕ ಕೆ.ಪಿ. ಸತ್ಯ ನಾರಾಯಣ್ ಹೇಳಿದರು.

ಈ ವೇಳೆ ಬಿಇಒ ಶ್ರೀನಿವಾಸ ಮೂರ್ತಿ, ಪ್ರಾoಶುಪಾಲ ಶ್ರೀನಿವಾಸ್, ಸಿಡಿಪಿಒ ಮೂಕಾಂಬಿಕಾ, ಪಿಎಸ್ಐ ಗೋಪಾಲ್, ಶಾಲಾ ಶಿಕ್ಷಕರು, ಪೋಷಕರು, ಎಸ್ಡಿಎಂಸಿ, ಶಾಲಾ ಮಕ್ಕಳ ಪ್ರತಿನಿಧಿಗಳು ಹಾಗೂ ಶಾಲಾ ಸುರಕ್ಷಿತ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.