ಚಿಕ್ಕಬಳ್ಳಾಪುರ: ನ್ಯಾಯಮೂರ್ತಿ ಜಾನ್ ಮೈಕಲ್ ಡಿಕುನ್ಹ ಆಯೋಗದ ಕೋವಿಡ್ ತನಿಖಾ ವರದಿಯ ಒಂದೊಂದೇ ಅಂಶಗಳನ್ನು ಮುಖ್ಯಮಂತ್ರಿ ಕಚೇರಿಯಿಂದಲೇ ಕಾನೂನು ಬಾಹಿರವಾಗಿ ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಪ್ರಕಾರ ಈ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ನಂತರ ಸದನದಲ್ಲಿ ಮಂಡಿಸಬೇಕಾಗಿತ್ತು.
ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಹಿಂದೆ ಯಾರು ಇದ್ದಾರೆ ಎನ್ನುವುದು ಗೊತ್ತು ಎಂದು ಹೇಳಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಇರಬೇಕಾಗಿದ್ದ 250 ಔಷಧಿಗಳ ಕೊರತೆ ಉಂಟಾಗಿದೆ. ಹಾಗಾದರೆ ಕಾಂಗ್ರೆಸ್ ಅವಧಿಯಲ್ಲಿ ಕೋವಿಡ್ ಬಂದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.