ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಡ್ಲಘಟ್ಟ | ನಿರ್ವಹಣೆ ಇಲ್ಲದ ಕಂದಾಯ ಭವನ: ಗೋಡೆಗಳಲ್ಲಿ ಗಿಡಗಳು ಬೆಳೆದು ಬಿರುಕು

Published : 18 ನವೆಂಬರ್ 2024, 6:45 IST
Last Updated : 18 ನವೆಂಬರ್ 2024, 6:45 IST
ಫಾಲೋ ಮಾಡಿ
Comments
ಕುಸಿಯುತ್ತಿರುವ ಮೇಲ್ಚಾವಣಿ
ಕುಸಿಯುತ್ತಿರುವ ಮೇಲ್ಚಾವಣಿ
ತ್ಯಾಜ್ಯದ ರಾಶಿ
ತ್ಯಾಜ್ಯದ ರಾಶಿ
ಆಸಕ್ತಿ ವಹಿಸದ ಜನಪ್ರತಿನಿಧಿಗಳು
ಚಿಕ್ಕಬಳ್ಳಾಪುರ ಜಿಲ್ಲೆ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಸವಿನೆನಪಿಗಾಗಿ ಮತ್ತು ಅವರ ಸ್ಮರಣೆಗಾಗಿ ಸ್ಮಾರಕ ನಿರ್ಮಿಸಲಾಗಿದೆ. ಆದರೆ ದುರಾದೃಷ್ಟವಶಾತ್ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹುತಾತ್ಮರಾದ ಭಕ್ತರಹಳ್ಳಿ ಸ್ವಾತಂತ್ರ್ಯ ಹೋರಾಟಗಾರರ ನೆನಪಿಗಾಗಿ ಕನಿಷ್ಠ ಸೌಜನ್ಯಕ್ಕಾದರೂ ಕಂದಾಯ ಭವನ ಸೂಕ್ತ ನಿರ್ವಹಣೆ ಮಾಡಿಕೊಂಡು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಆಸಕ್ತಿ ವಹಿಸಿದೆ ಇರುವುದು ದುರಂತವೇ ಸರಿ. ಭಕ್ತರಹಳ್ಳಿ ಬೈರೇಗೌಡ ರೈತಸಂಘದ ರಾಜ್ಯ ಕಾರ್ಯಾಧ್ಯಕ್ಷ
ಅಧಿಕಾರಿಗಳಿಗೆ ಹಿಡಿಶಾಪ
ಕಾಲಕ್ರಮೇಣ ನಿರ್ವಹಣೆ ಕೊರತೆಯಿಂದಾಗಿ ಮತ್ತೆ ಅದೇ ರಾಗ ಅದೇ ಹಾಡುವ ಎಂಬಂತೆ ಶಿಥಿಲ ವ್ಯವಸ್ಥೆಗೆ ಕಟ್ಟಡ ತಲುಪಿದ್ದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ನಾಲ್ಕು ಹೋಬಳಿಗಳ ರಾಜಸ್ವ ನಿರೀಕ್ಷಕರು ಮತ್ತು ಗ್ರಾಮಲೆಕ್ಕಾಧಿಕಾರಿ ಈ ಕಂದಾಯ ಭವನದಲ್ಲಿ ತಮ್ಮ ಕೆಲಸ ಮುಂದುವರಿಸಿದ್ದಾರೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗಾಗಿ ಪ್ರತಿನಿತ್ಯ ನೂರಾರು ಜನ ಇಲ್ಲಿನ ಕಂದಾಯ ಭವನಕ್ಕೆ ಬಂದು ಹೋಗುತ್ತಾರೆ. ಆದರೆ ಇಲ್ಲಿನ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ನೋಡಿ ಸರ್ಕಾರ ಮತ್ತು ಇಲಾಖೆ ಹಿರಿಯ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT