ಲೋಕಸಭೆ ಚುನಾವಣೆ; ಅಖಾಡಕ್ಕಿಳಿದ ಮಾಜಿ ಸಚಿವ ಡಾ.ಕೆ.ಸುಧಾಕರ್
ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿಯ ನಂತರ ಕಾರ್ಯಕರ್ತರು, ಮುಖಂಡರಲ್ಲಿ ಸಂಚಲನ
ಡಿ.ಎಂ.ಕುರ್ಕೆ ಪ್ರಶಾಂತ್
Published : 5 ಫೆಬ್ರುವರಿ 2024, 5:31 IST
Last Updated : 5 ಫೆಬ್ರುವರಿ 2024, 5:31 IST
ಫಾಲೋ ಮಾಡಿ
Comments
ಒಕ್ಕಲಿಗರ ಮತ ಹೆಚ್ಚು
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಕ್ಕಲಿಗ ಮತದಾರರ ಪ್ರಾಬಲ್ಯವಿದೆ. ಈ ಸಮುದಾಯದ ಅಂದಾಜು 7 ಲಕ್ಷ ಮತದಾರರು ಇದ್ದಾರೆ. ಹೀಗಿದ್ದರೂ ಈ ಕ್ಷೇತ್ರದಲ್ಲಿ ಒಕ್ಕಲಿಗರು ಎರಡು ಬಾರಿ ಮಾತ್ರ ಗೆಲುವು ಸಾಧಿಸಿದ್ದಾರೆ. ಬಹುಸಂಖ್ಯೆಯ ಒಕ್ಕಲಿಗರು ಒಟ್ಟಾದ ಪರಿಣಾಮ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿ.ಎನ್.ಬಚ್ಚೇಗೌಡ ದಾಖಲೆಯ ಮತಗಳಿಂದ ಗೆಲುವು ಸಾಧಿಸಿದರು. ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯಲು ಕಾರಣರಾದರು. ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಅಭ್ಯರ್ಥಿಯೇ ಕಣಕ್ಕೆ ಇಳಿಯುವುದು ಖಚಿತ. ಡಾ.ಕೆ.ಸುಧಾಕರ್ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಸುಧಾಕರ್ ಆಗಾಗ್ಗೆ ಭೇಟಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಸಹಕಾರ ಕೋರಿದ್ದಾರೆ ಎನ್ನುತ್ತವೆ ಮೂಲಗಳು.